UN NETWORKS
ದೇರಳಕಟ್ಟೆ: ವಿದ್ಯಾಲಯ ಎಂಬುದು ಜ್ಞಾನ ಭಂಡಾರ. ಜ್ಞಾನ ಸಂಪಾದನೆಗೆ ಓದಿದಷ್ಟು ಮುಗಿಯದು. ವಿದ್ಯಾಲಯದಲ್ಲಿ ಜ್ಞಾನ ಕೊಡಲು ಕೊಡಲು ಪ್ರಾರ್ಥಿಸಿದರೆ ದೇವಾಲಯದಲ್ಲಿ ನಮ್ಮ ಇಷ್ಟಾರ್ಥ ನೆರವೇರಿಸುವಂತೆ ಪ್ರಾರ್ಥಿಸುತ್ತೇವೆ ಎಂದು ದೇರಳಕಟ್ಟೆ ಅಯ್ಯಪ್ಪಸ್ವಾಮಿ ದೇವಸ್ಥಾನದ ಆಡಳಿತ ಮೊಕ್ತೇಸರ ಕೆ. ಚಂದ್ರಹಾಸ ಅಡ್ಯಂತಾಯ ಹೇಳಿದರು.
ದೇರಳಕಟ್ಟೆಯ ಜಿಲ್ಲಾ ಪಂಚಾಯಿತಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲೆ ಹಳೆ ವಿದ್ಯಾರ್ಥಿ ಸಂಘದ ಸಹಯೋಗದೊಂದಿಗೆ ನಡೆದ ಶಾಲಾ ಪ್ರತಿಭೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ದೇರಳಕಟ್ಟೆಯ ಶಾಲೆಯನ್ನು ನಿರ್ಮಿಸಲು ಸ್ಥಳದಾನ ಮಾಡಿದ ದಾನಿಗಳನ್ನು ವಿದ್ಯಾರ್ಥಿಗಳು ಹಾಗೂ ಪೋಷಕರು ಸದಾ ಸ್ಮರಣೆಯಲ್ಲಿ ಇಡಬೇಕು ಎಂದು ತಾಲೂಕು ಪಂಚಾಯಿತಿ ಅಧ್ಯಕ್ಷ ಮಹಮ್ಮದ್ ಮೋನು ಹೇಳಿದರು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಬಿ.ಎ. ಅಬ್ದುಲ್ ಖಾದರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು.ಮಂಗಳೂರು ದಕ್ಷಿಣ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಆರ್ ಲೋಕೇಶ್, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಸದಸ್ಯೆ ರಶೀದಾ ಬಾನು, ಬೆಳ್ಮ ಗ್ರಾಮ ಪಂಚಾಯಿತಿ ಅಧ್ಯಕ್ಷ ವಿಜಯ ಕೃಷ್ಣಪ್ಪ ಪೂಜಾರಿ, ಉಪಾಧ್ಯಕ್ಷ ಬಿ.ಎಂ. ಅಬ್ದುಲ್ ಸತ್ತಾರ್, ಯೂನಿಯನ್ ಬ್ಯಾಂಕ್ ದೇರಳಕಟ್ಟೆಯ ಶಾಖಾ ಪ್ರಬಂಧಕ ವಿಜಯ ವಿ. ಬೋರ್ಕರ್, ಹಳೆ ವಿದ್ಯಾರ್ಥಿ ಸಂಘದ ಗೌರವಾಧ್ಯಕ್ಷ ಸುರೇಶ್ ಚೌಟ, ಕುತ್ತಾರು ಪಂಜತ್ತಾಯ ದೈವಸ್ಥಾನ ಅಡಳಿತ ಮೊಕ್ತೇಸರ ರವೀಂದ್ರನಾಥ ಪೂಂಜ, ಬೆಳ್ಮ ಗ್ರಾಮ ಪಂಚಾಯಿತಿ ಸದಸ್ಯ ಉಸ್ಮಾನ್ ಅಕ್ಸಾ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಜಗದೀಶ್ ರೈ, ದೇರಳಕಟ್ಟೆ ಅಯ್ಯಪ್ಪ ದೇವಸ್ಥಾನದ ಮೊಕ್ತೇಸರ ನಾರಾಯಣ ಶೆಟ್ಟಿ, ನಿವೃತ್ತ ಶಿಕ್ಷಕ ಅನಂದ, ಪಾನೀರ್ ರಹ್ಮಾನಿಯ ಜುಮಾ ಮಸೀದಿಯ ಅಧ್ಯಕ್ಷ ಹಾಜಿ ಅಬ್ದುಲ್ ರಹ್ಮಾನ್, ಕಿಶೋರ್ ಕುಮಾರ್ ಶೆಟ್ಟಿ, ಶಾಲಾಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿ ಉಪಾಧ್ಯಕ್ಷೆ ಜಯಂತಿ, ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ ರಾಜೇಶ್ವರಿ ಹಾಗೂ ರವೀಂದ್ರ ಎಂ. ಶೆಟ್ಟಿ ಉಪಸ್ಥಿತರಿದ್ದರು.ನಿವೃತ್ತ ಅಧ್ಯಾಪಕ ಗಣೇಶ್ ರಾವ್ ಅವರನ್ನು ಸನ್ಮಾನಿಸಲಾಯಿತು.
ಹಳೆ ವಿದ್ಯಾರ್ಥಿ ಸಂಘದ ಸಂಘಟನಾ ಕಾರ್ಯದರ್ಶಿ ಹಾಜಿ ಡಿ.ಎ ಸಿದ್ದೀಕ್ ದುಬೈ ಸ್ವಾಗತಿಸಿದರು. ಮುಖ್ಯ ಶಿಕ್ಷಕಿ ಸಿಲ್ವಿಯಾ ಕಾರ್ಯಕ್ರಮ ನಿರೂಪಿಸಿದರು. ಉಪಾಧ್ಯಕ್ಷ ಅಬ್ದುಲ್ ಖಾದರ್ ವಂದಿಸಿದರು.


