UN NETWORKS
ಮಂಗಳೂರು: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ಗಾಂಜಾ ಮಾರಾಟದ ಆರೋಪಿಯನ್ನು ನಗರದ ಇಕೊನಾಮಿಕ್ ಮತ್ತು ನಾರ್ಕೋಟಿಕ್ಸ್ ಕ್ರೈಂ ಪೊಲೀಸ್ ಠಾಣೆ ಪೊಲೀಸರು ತಲಪಾಡಿ ಟೋಲ್ ಗೇಟ್ ಸಮೀಪ ಬಂಧಿಸಿದ್ದಾರೆ.
ಮಂಜೇಶ್ವರ ತೂಮಿನಾಡು ನಿವಾಸಿ ಆಸೀಫ್ (33) ಬಂಧಿತ. ಹಲವು ಗಾಂಜಾ ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ವಿವಿಧ ಠಾಣೆಗಳಲ್ಲಿ ಈತನ ಮೇಲೆ ಪ್ರಕರಣವಿದೆ. ಹೆಚ್ಚು ಕೇರಳ ಭಾಗದಿಂದ ಕರ್ನಾಟಕಕ್ಕೆ ತಂದು ಶಾಲಾ-ಕಾಲೇಜು ಆವರಣಗಳಲ್ಲಿ ಮಾರಾಟ ಮಾಡುತ್ತಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಇತ್ತು. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.


