UN NETWORKS
ಮುಡಿಪು: ಬಿಜೆಪಿ ಮಂಗಳೂರು ವಿಧಾನಸಭಾ ಕ್ಷೇತ್ರದ ಕುರ್ನಾಡು ಮಹಾಶಕ್ತಿ ಕೇಂದ್ರ ಆಶ್ರಯದಲ್ಲಿ ಜ.20 ರಂದು ಸಂಜೆ 4.30ಕ್ಕೆ ಚುನಾವಣಾ ಕಾರ್ಯಾಲಯ ಉದ್ಘಾಟನೆ ಹಾಗೂ ಕಾರ್ಯಕರ್ತರ ಬೃಹತ್ ಸಮಾವೇಶ ನಡೆಯಲಿದೆ. ಲೋಕಸಭಾ ಕ್ಷೇತ್ರದ ಚುನಾವಣಾ ತಯಾರಿ ದೃಷ್ಟಿಯಿಂದ ಚುನಾವಣಾ ಕಾರ್ಯಾಲಯ ಉದ್ಘಾಟನೆ ಹಾಗೂ ಕಾರ್ಯಕರ್ತರ ಬೃಹತ್ ಸಮಾವೇಶ ಮುಡಿಪು ಅಮರ್ ದೀಪ ಕಾಂಪ್ಲೆಕ್ಸ್ ನಲ್ಲಿ ಸಂಜೆ 4.30ಕ್ಕೆ ನಡೆಯಲಿದೆ.
ಸಂಸದ ನಳಿನ್ ಕುಮಾರ್ ಕಟೀಲ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಪುತ್ತೂರು ಶಾಸಕ ಸಂಜೀವ ಮಠಂದೂರು, ಕಾರ್ಕಳ ಶಾಸಕ ಸುನಿಲ್ ಕುಮಾರ್, ಮಂಗಳೂರು ಲೋಕಸಭಾ ಕ್ಷೇತ್ರ ಸಂಚಾಲಕ ಗೋಪಾಲಕೃಷ್ಣ ಹೇರಳ ಹಾಗೂ ಅಧ್ಯಕ್ಷತೆಯನ್ನು ಸಂತೋಷ್ ಕುಮಾರ್ ಬೋಳಿಯಾರ್ ವಹಿಸಲಿದ್ದಾರೆ.ಕಾರ್ಯಕ್ರಮಕ್ಕೆ ಪೂರ್ವಭಾವಿಯಾಗಿ 4.00 ಗಂಟೆಗೆ ತೌಡುಗೋಳಿ ಕ್ರಾಸ್ ನಿಂದ , 4.15ಕ್ಕೆ ಬೋಳಿಯಾರಿನಿಂದ ಬೈಕ್ ರ್ಯಾಲಿ ಆರಂಭವಾಗಿ ಮುಡಿಪುವಿನಲ್ಲಿ ಸಮಾಪನೆಗೊಳ್ಳಲಿದೆ.




