Site icon Ullalavani

ನಾಗಪ್ಪ ಶೆಟ್ಟಿ ಇನೋಳಿ ನಿಧನ

UN NETWORKS

ಇನೋಳಿ: ಇನೋಳಿ ಬಾರ್ಲ ನಿವಾಸಿ, ಪಾವೂರು ಗ್ರಾಪಂ ಮಾಜಿ ಸದಸ್ಯ ನಾಗಪ್ಪ ಶೆಟ್ಟಿ ಇನೋಳಿ (80) ರವಿವಾರ ರಾತ್ರಿ ತನ್ನ ಸ್ವಗೃಹದಲ್ಲಿ ನಿಧನರಾದರು.

ಮೂರು ಅವಧಿಗೆ ಪಾವೂರು ಗ್ರಾಮ ಪಂಚಾಯತ್ ಸದಸ್ಯರಾಗಿ ಜನಾನುರಾಗಿಯಾಗಿದ್ದ ನಾಗಪ್ಪ ಶೆಟ್ಟಿ, ಅನ್ಯಾಯದ ವಿರುದ್ಧ ಧ್ವನಿ ಎತ್ತುವ ಮೂಲಕ ಗಮನ ಸೆಳೆದಿದ್ದರು. ಸ್ಥಳೀಯ ದೇವಸ್ಥಾನ ಸಮಿತಿಯ ಮತ್ತು ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಮೃತರು ಪತ್ನಿ ಹಾಗೂ ಎಂಟು ಮಂದಿ ಪುತ್ರಿಯರು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.

Exit mobile version