UN NETWORKS
ಕೊಣಾಜೆ : ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಕಳೆದ ನಾಲ್ಕೈದು ತಿಂಗಳಿಂದ ಖಾಲಿ ಇರುವ ಕಾನೂನು ಸುವ್ಯವಸ್ಥೆ ಹಾಗು ಕ್ರೈಂ ವಿಭಾಗದ ಉಪನಿರೀಕ್ಷಕರು ಹಾಗೂ ಇತರ ಖಾಲಿ ಹುದ್ದೆಗಳಿಗೆ ಅಧಿಕಾರಿಗಳನ್ನು ನೇಮಿಸುವಂತೆ ಒತ್ತಾಯಿಸಿ ಡಿವೈಎಫ್‍ಐ ನಿಯೋಗ ಪೊಲೀಸ್ ಆಯುಕ್ತರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ.
ಕೊಣಾಜೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಾನೂನು ಬಾಹಿರ ಚಟುವಟಿಕೆಗಳು ನಿರಂತರವಾಗಿ ನಡೆಯುತ್ತಿದ್ದು, ಅಕ್ರಮ ಮರಳುಗಾರಿಕೆ ರಾಜಾರೋಷವಾಗಿ ನಡೆಯುತ್ತಿದೆ. ಕಳ್ಳತನ, ಗಾಂಜಾ ಸಾಗಾಟ, ಸುಲಿಗೆಯಂತಹ ಚಟುವಟಿಕೆಗಳಿಂದ ಜನರು ಭೀತಿಯಿಂದ ಬದುಕುವಂತಾಗಿದೆ. ಆದ್ದರಿಂದ ಕೂಡಲೇ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮಕೈಗೊಳ್ಳುವಂತೆ ನಿಯೋಗ ಒತ್ತಾಯಿಸಿತು.
ನಿಯೋಗದಲ್ಲಿ ಡಿವೈಎಫ್‍ಐ ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್, ಉಳ್ಳಾಲ ವಲಯ ಉಪಾಧ್ಯಕ್ಷ ರಫೀಕ್ ಹರೇಕಳ, ಮುಖಂಡರಾದ ಅಶ್ರಫ್ ಕೆ.ಸಿ.ರೋಡ್, ಸುನೀಲ್ ತೇವುಲ ಹಾಗೂ ಶಾಕಿರ್ ಹರೇಕಳ ಉಪಸ್ಥಿತರಿದ್ದರು.


