UN NETWORKS
ಕೊಣಾಜೆ: ಮಂಗಳೂರು ವಿಶ್ವವಿದ್ಯಾಲಯದ ಶಿಕ್ಷಕೇತರ ಉದ್ಯೋಗಿಗಳ ಸಂಘದ ವೈದ್ಯಕೀಯ ನೆರವು ಘಟಕದ ವತಿಯಿಂದ ಉಚಿತ ವೈದ್ಯಕೀಯ ತಪಾಸಣಾ ಶಿಬಿರವು ಮಂಗಳೂರು ವಿವಿಯ ಆರೋಗ್ಯ ಕೇಂದ್ರದಲ್ಲಿ ಕಿನ್ಯ ಶಾರದಾ ಆಯುರ್ವೇದ ಆಸ್ಪತ್ರೆಯ ಸಹಯೋಗದಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಮಂಗಳೂರು ವಿಶ್ವವಿದ್ಯಾನಿಲಯದ ಕುಲಸಚಿವರಾದ ಪ್ರೊ.ಎ.ಎಂ.ಖಾನ್ ಅವರು, ಆಯುರ್ವೇದ ಬಗೆಗಿನ ಜ್ಞಾನವನ್ನು ನಾವು ಹೆಚ್ಚೆಚ್ಚು ಪಸರಿಸುವ ಕಾರ್ಯ ಮಾಡಬೇಕು. ಅಲ್ಲದೆ ಆರ್ಯುವೇದವನ್ನು ನಾವು ಅನುಸರಿಸುತ್ತಾ ಬಂದರೆ ಹೆಚ್ಚು ಆರೋಗ್ಯವನ್ನು ಕಾಪಾಡಿಕೊಳ್ಳಲು ಸಾಧ್ಯ ಎಂದು ಹೇಳಿದರು.ಕಾರ್ಯಕ್ರಮದಲ್ಲಿ ಡಾ.ರಾಜೇಶ್, ಡಾ.ರವಿ ಗಣೇಶ್, ವಿವೇಕ್ ತಂತ್ರಿ, ಕಮಲಾಕ್ಷಿ ಪಿ, ಶಿವಾನಂದ ಪೂಜಾರಿ, ತಝನೀಸ್ ಬಾನು, ನಾಗಪ್ಪ ಗೌಡ ಮೊದಲಾದವರು ಉಪಸ್ಥಿತರಿದ್ದರು.