UN NETWORKS
ಮುಡಿಪು: ಕಾರೊಂದು ಶಾರ್ಟ್ ಸಕ್ರ್ಯೂಟ್‍ನಿಂದಾಗಿ ಬೆಂಕಿಗೆ ಆಹುತಿಯಾದ ಘಟನೆ ಮುಡಿಪು ಸಮೀಪದ ಹೂಹಾಕುವಕಲ್ಲು ಎಂಬಲ್ಲಿ ಭಾನುವಾರ ಮಧ್ಯಾಹ್ನ ನಡೆದಿದೆ.
ಹೂಹಾಕುವ ಕಲ್ಲಿನಿಂದ ಮುಡಿಪು ಕಡೆಗೆ ಸಂಚರಿಸುತ್ತಿದ್ದ ಮಾರುತಿ 800 ಕಾರ್ ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿತ್ತು. ಕೂಡಲೇ ಕಾರಿನೊಳಗಿದ್ದ ದಂಪತಿಗಳು ಕಾರಿನಿಂದ ಇಳಿದ ಕಾರಣ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಶಾರ್ಟ್ ಸಕ್ರ್ಯೂಟ್‍ನಿಂದಾಗಿ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು ಎನ್ನಲಾಗಿದೆ. ಘಟನೆಯಲ್ಲಿ ಕಾರು ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿದೆ


