ಫೆ.24 ರಂದು ಕುತ್ತಾರಿನಿಂದ ಕೊಣಾಜೆಗೆ ಬಿಜೆಪಿ ಬೃಹತ್ ಜನಬೆಂಬಲ ಯಾತ್ರೆ
UllalaVani
UN NETWORKS
ತೊಕ್ಕೊಟ್ಟು: ಮತ್ತೊಮ್ಮೆ ಮೋದಿ ಅನ್ನುವ ಘೋಷವಾಕ್ಯದೊಂದಿಗೆ ಜಿಲ್ಲೆಯ ಸಂಸದರಿಗೆ ಜನ ಬೆಂಬಲಿಸುವ ಉದ್ದೇಶದೊಂದಿಗೆ ಫೆ. 24 ರಂದು ಸಂಜೆ ಕುತ್ತಾರು ಶ್ರೀ ರಾಜರಾಜೇಶ್ವರಿ ಸಿದ್ಧಿವಿನಾಯಕ ದೇವಸ್ಥಾನದಿಂದ ಅಸೈಗೋಳಿವರೆಗೆ ಕೊಣಾಜೆ ಶಕ್ತಿಕೇಂದ್ರದ ಆಶ್ರಯದಲ್ಲಿ ಜನಬೆಂಬಲ ಯಾತ್ರೆ ನಡೆಯಲಿದೆ ಎಂದು ಕೊಣಾಜೆ ಶಕ್ತಿಕೇಂದ್ರದ ಅಧ್ಯಕ್ಷ ಸುರೇಶ್ ಶೆಟ್ಟಿ ಅಂಬ್ಲಮೊಗರು ತಿಳಿಸಿದರು.ತೊಕ್ಕೊಟ್ಟುವಿನಲ್ಲಿ ನಡೆಸಿದ ಸುದ್ಧಿಗೋಷ್ಠಿಯಲ್ಲಿ ಕಾರ್ಯಕ್ರಮದ ಮಾಹಿತಿ ನೀಡಿದರು.
ಸಂಜೆ 4 ಕ್ಕೆ ವಾಹನಾ ಜಾಥಾಕ್ಕೆ ಚಾಲನೆ ನೀಡಲಾಗುವುದು. ಅಸೈಗೋಳಿಯ ಗಣೇಶ್ ಮಹಲಿನಲ್ಲಿ ನೂತನ ಶಕ್ತಿಕೇಂದ್ರದ ಉದ್ಘಾಟನೆ ನಡೆಯಲಿದೆ. ಕಾರ್ಯಕ್ರಮದಲ್ಲಿ ವಿಧಾನಪರಿಷತ್ ಪ್ರತಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ, ಸಂಸದ ನಳಿನ್ ಕುಮಾರ್ ಕಟೀಲ್, ಕಾರ್ಕಳ ಶಾಸಕ ಸುನಿಲ್ ಕುಮಾರ್, ಬಿಜೆಪಿ ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು ಸೇರಿದಂತೆ ವಿವಿಧ ಗಣ್ಯರು ಭಾಗಿಯಾಗಲಿದ್ದಾರೆ. ಇದೇ ಸಂದರ್ಭ ಪಕ್ಷಕ್ಕಾಗಿ ಸೇವೆ ಸಲ್ಲಿಸಿದ ಗಣ್ಯರನ್ನು ಗೌರವಿಸುವ ಕಾರ್ಯಕ್ರಮವೂ ನಡೆಯಲಿದೆ ಎಂದರು. ಕ್ಷೇತ್ರ ಅಧ್ಯಕ್ಷ ಸಂತೋಷ್ ರೈ ಬೋಳಿಯಾರ್ ಮಾತನಾಡಿ, ಜಿಲ್ಲೆ ಹಾಗೂ ರಾಜ್ಯಕ್ಕೆ ಮಾದರಿಯಾಗುವ ರೀತಿಯಲ್ಲಿ ಮಂಗಳೂರು ಕ್ಷೇತ್ರದ ಐದು ಶಕ್ತಿಕೇಂದ್ರದ ವತಿಯಿಂದ ಜನಬೆಂಬಲ ಯಾತ್ರೆ ಕಾರ್ಯಕ್ರಮ ನಡೆಸಲಾಗುತ್ತಿದೆ. ಎಂಟು ಗ್ರಾಮಗಳ ಕಾರ್ಯಕರ್ತರು ವಾಹನ ಜಾಥದಲ್ಲಿ ಭಾಗವಹಿಸಲಿದ್ದಾರೆ. ಈ ಬಾರಿ ಕ್ಷೇತ್ರದಿಂದ ಸಂಸದರಿಗೆ ಹೆಚ್ಚಿನ ಮತವನ್ನು ಕೊಡುವ ಉದ್ದೇಶದಿಂದ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದರು.
ಈ ವೇಳೆ ಮಾಜಿ ಶಾಸಕ ಜಯರಾಮ ಶೆಟ್ಟಿ, ಜಿ.ಪಂ ಸದಸ್ಯೆ ಧನಲಕ್ಷ್ಮೀ ಗಟ್ಟಿ, ಕ್ಷೇತ್ರ ಪ್ರಧಾನ ಕಾರ್ಯದರ್ಶಿ ಹೇಮಂತ್ ಶೆಟ್ಟಿ ದೇರಳಕಟ್ಟೆ, ಮುಖಂಡರುಗಳಾದ ಮೋಹನ್ ರಾಜ್ ಕೆ.ಆರ್, ಸಂಜೀವ ಶೆಟ್ಟಿ ಅಂಬ್ಲಮೊಗರು, ಮನೋಜ್ ಆಚಾರ್ಯ, ಬಾಬು ಶೆಟ್ಟಿ ಮುನ್ನೂರು ಉಪಸ್ಥಿತರಿದ್ದರು.