Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
ಉಳ್ಳಾಲ

ಉಳ್ಳಾಲ: ದರ್ಗಾದಲ್ಲಿ ಉಚಿತ ವೈದ್ಯಕೀಯ ಶಿಬಿರ

UllalaVaniBy UllalaVaniFebruary 26, 2019No Comments1 Min Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

UN NETWORKS

ಉಳ್ಳಾಲ: ಅರೆಹೊಟ್ಟೆ ಆಹಾರ ಸೇವನೆ ಕುರ್‍ಆನ್ ಆದೇಶವಾಗಿದ್ದರೂ, ನಾವಿಂದು ರುಚಿ ಮತ್ತು ಹೊಸ ಹೆಸರಿನ ಆಹಾರಕ್ಕೆ ಮಾರುಹೋಗಿ ಅಗತ್ಯಕ್ಕಿಂತ ಅಧಿಕ ಆಹಾರ ಸೇವನೆ ಮೂಲಕ ಕಾಯಿಲೆಗಳಿಗೆ ಆಹ್ವಾನ ನೀಡುತ್ತಿದ್ದೇವೆ ಎಂದು ಸಯ್ಯಿದ್ ಮದನಿ ದರ್ಗಾ ಅಧ್ಯಕ್ಷ ಅಬ್ದುಲ್ ರಶೀದ್ ಅಭಿಪ್ರಾಯಪಟ್ಟರು.

ಕೇಂದ್ರ ಜುಮಾ ಮಸೀದಿ ಮತ್ತು ಹಖ್ರತ್ ಸಯ್ಯಿದ್ ಮದನಿ ದರ್ಗಾ ಸಮಿತಿಯಿಂದ ದೇರಳಕಟ್ಟೆ ಕಣಚೂರು ವೈದ್ಯಕೀಯ ಕಾಲೇಜಿನ ಸಹಕಾರದಲ್ಲಿ ಭಾನುವಾರ ದರ್ಗಾ ವಠಾರದಲ್ಲಿ ನಡೆದ ಉಚಿತ ಆರೋಗ್ಯ ತಪಾಸಣಾ ಶಿಬಿರದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಇಂದಿನ ಆಧುನಿಕ ಆಹಾರ ಪದ್ಧತಿಯಿಂದಾಗಿ ಕಾಯಿಲೆ ಹೆಚ್ಚಾಗುತ್ತಿದ್ದು, ಅದೇ ರೀತಿ ಆಸ್ಪತ್ರೆಗಳೂ ಹೆಚ್ಚಾಗಿವೆ. ಉಳ್ಳಾಲ ವ್ಯಾಪ್ತಿಯಲ್ಲೇ ನಾಲ್ಕು ಖಾಸಗಿ ವೈದ್ಯಕೀಯ ಕಾಲೇಜುಗಳಿವೆ. ಆದರೂ ಕಾಯಿಲೆ ಬಂದಾಗ ಸರ್ಕಾರಿ ಆಸ್ಪತ್ರೆಗಳು, ವೈದ್ಯಕೀಯ ಕಾಲೇಜುಗಳನ್ನು ಕಡೆಗಣಿಸಿ ಚಿಕಿತ್ಸೆಗಾಗಿ ಅರ್ಜಿ ಹಿಡಿದು ಬೇಡುವುದನ್ನು ಕಾಣುತ್ತಿದ್ದೇವೆ ಎಂದು ಹೇಳಿದರು. ಕಣಚೂರು ಸಂಸ್ಥೆಯ ನಿರ್ದೇಶಕ ಅಬ್ದುಲ್ ರಹಿಮಾನ್ ಉದ್ಘಾಟಿಸಿದರು. ಸಹಾಯಕ ಖಾಝಿ ಅಬ್ದುಲ್ ರವೂಫ್ ಮುಸ್ಲಿಯಾರ್ ದುವಾ ಮಾಡಿದರು. ಅರೆಬಿಕ್ ಕಾಲೇಜಿನ ಪ್ರಾಂಶುಪಾಲ ಉಸ್ಮಾನ್ ಫೈಝಿ ತೋಡಾರ್, ಖತೀಬ್ ಅಬ್ದುಲ್ ಅಝೀಝ್ ಬಾಖವಿ, ಮುಫತ್ತಿಷ್ ಸುಲೈಮಾನ್ ಸಖಾಫಿ, ಪ್ರಾಂಶುಪಾಲ ಝೈನ್ ಸಖಾಫಿ, ಉಪಾಧ್ಯಕ್ಷ ಯು.ಕೆ.ಮೋನು ಇಸ್ಮಾಯಿಲ್, ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ತ್ವಾಹ, ಪದಾಧಿಕಾರಿಗಳಾದ ಬಾವ ಮುಹಮ್ಮದ್, ಯು.ಕೆ.ಇಲ್ಯಾಸ್, ನೌಷಾದ್ ಮೇಲಂಗಡಿ, ಯು.ಟಿಇಲ್ಯಾಸ್, ಅಝಾದ್ ಇಸ್ಮಾಯಿಲ್, ಕಾಂಗ್ರೆಸ್ ವಕ್ತಾರ ಫಾರೂಕ್ ಉಳ್ಳಾಲ್, ಆಸಿಫ್ ಅಬ್ದುಲ್ಲಾ, ಅಮೀರ್, ಇಬ್ರಾಹಿಂ ಕಕ್ಕೆತೋಟ, ಅಯೂಬ್ ಮಂಚಿಲ, ಅಝಾದ್ ಇಸ್ಮಾಯಿಲ್ ಇನ್ನಿತರರು ಉಪಸ್ಥಿತರಿದ್ದರು. ಎವರೆಸ್ಟ್ ಮುಸ್ತಫಾ ಸ್ವಾಗತಿಸಿದರು. ಸಲಾಂ ಮದನಿ ಅಳಿಕೆ ಕಾರ್ಯಕ್ರಮ ನಿರೂಪಿಸಿದರು.

`ಸಯ್ಯಿದ್ ಮದನಿ ದರ್ಗಾದಲ್ಲಿ ಧಾರ್ಮಿಕ ಹಾಗೂ ಸಾಮಾಜಿಕ ಸೇವೆ ನಡೆಯುತ್ತಿದೆ, ವೈದ್ಯಕೀಯ ಶಿಬಿರ ನಡೆಸಬೇಕೆನ್ನುವ ಬೇಡಿಕೆ ಮೇರೆಗೆ ಎಲ್ಲ ವೈದ್ಯರೂ ಶಿಬಿರದಲ್ಲಿ ಭಾಗವಹಿಸಿದ್ದಾರೆ. ಹೆಸರಿಗಾಗಿ ಶಿಬಿರ ನಡೆಸದೆ ಇಹ-ಪರ ವಿಜಯಕ್ಕಾಗಿ ನಡೆಸುತ್ತಿದ್ದೇವೆ’
ಅಬ್ದುಲ್ ರಹಿಮಾನ್, ಕಣಚೂರು ಸಂಸ್ಥೆಯ ನಿರ್ದೇಶಕ

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಉಳ್ಳಾಲವಾಣಿ ಬಹಿರಂಗಪಡಿಸಿದ್ದ ಸಮಸ್ಯೆಗೆ ಸ್ಪಂದನೆ: ವಾಣಿಜ್ಯ ಕಟ್ಟಡಗಳಿಗೆ ನೋಟಿಸ್ ಜ್ಯಾರಿ ಮಾಡಿ ಸಭೆ ಕರೆದ ಮುನ್ನೂರು ಗ್ರಾಮ ಪಂಚಾಯತ್

June 12, 2026

ಜೂನ್ 14ರಂದು ಕಂಬಳಪದವಿನಲ್ಲಿ ಸುಹಾ ಫರ್ನಿಚರ್ಸ್ ಶುಭಾರಂಭ

June 12, 2026

ಜನಸಂಘದ ಹಿರಿಯ ಕಾರ್ಯಕರ್ತ ವಿಠಲ್ ಕೊಟ್ಟಾರಿ ನಿಧನ..!!

June 12, 2026
Leave A Reply

Advertise
ಸಂಪರ್ಕಿಸಿ

ಕರ್ನಾಟಕದಾದ್ಯಂತ ಆರೋಗ್ಯ ಇಲಾಖೆಯಲ್ಲಿ ಮೆಗಾ ನೇಮಕಾತಿ: ಸಾರ್ವಜನಿಕ ಆರೋಗ್ಯ ಸೇವೆ ಬಲಪಡಿಸಲು ಮಹತ್ವದ ಹೆಜ್ಜೆ

June 11, 2026

ರಾಜ್ಯದಲ್ಲಿ ಖಾಸಗಿ ಅಸ್ಪತ್ರೆಯಲ್ಲಿ ಆಯುಷ್ಮಾನ್ ಯೋಜನೆ ಸಮರ್ಪಕ ಜಾರಿಗೆ ಜ್ಯಾರಿ ಆಗದಿದ್ದರೆ ಜಿಲ್ಲೆಯ ಅರೋಗ್ಯಧಾರಿಗಳ ಮೇಲೆ ಕ್ರಮ :- ಅರೋಗ್ಯ ಸಚಿವ ಯು.ಟಿ ಖಾದರ್

June 9, 2026

ಫೀಲ್ಡ್ ಗೆ ಇಳಿದ ಯು.ಟಿ. ಖಾದರ್ – ಸರ್ಕಾರಿ ಆಸ್ಪತ್ರೆ ವೈದ್ಯರಿಗೆ ಕ್ಲಾಸ್…!

June 5, 2026

ವೆನ್ಲಾಕ್ ಆಸ್ಪತ್ರೆಯಲ್ಲಿ ಮನೋವೈದ್ಯರು ಮತ್ತು ಕ್ಲಿನಿಕಲ್ ಸೈಕಾಲಜಿಸ್ಟ್‌ಗಳ ತೀವ್ರ ಕೊರತೆ – ಬಡ ರೋಗಿಗಳ ನಿರ್ಲಕ್ಷ್ಯ ಯಾಕೆ ಎಂದು ಸಾರ್ವಜನಿಕರ ಪ್ರಶ್ನೆ

May 26, 2026
suddi

ಉಳ್ಳಾಲವಾಣಿ ಬಹಿರಂಗಪಡಿಸಿದ್ದ ಸಮಸ್ಯೆಗೆ ಸ್ಪಂದನೆ: ವಾಣಿಜ್ಯ ಕಟ್ಟಡಗಳಿಗೆ ನೋಟಿಸ್ ಜ್ಯಾರಿ ಮಾಡಿ ಸಭೆ ಕರೆದ ಮುನ್ನೂರು ಗ್ರಾಮ ಪಂಚಾಯತ್

By UllalaVaniJune 12, 20260

ಮುನ್ನೂರು, ಜೂನ್ 12: ಹಲವು ದಿನಗಳಿಂದ ಸಾರ್ವಜನಿಕರ ಹಾಗೂ ಶಾಲಾ ಆಡಳಿತ ಮಂಡಳಿಯ ಆತಂಕಕ್ಕೆ ಕಾರಣವಾಗಿದ್ದ ಕುತ್ತಾರು ಪದವು ಪ್ರದೇಶದ…

ಜೂನ್ 14ರಂದು ಬೆಂಗಳೂರಿನಲ್ಲಿ ಸ್ಟೂಡೆಂಟ್ಸ್ ಫಾರ್ಮರ್ಸ್ ವಾಕಥಾನ್

June 12, 2026

ಜೂನ್ 14ರಂದು ಕಂಬಳಪದವಿನಲ್ಲಿ ಸುಹಾ ಫರ್ನಿಚರ್ಸ್ ಶುಭಾರಂಭ

June 12, 2026

ಹಿರಿಯ ಪತ್ರಕರ್ತ, ನಿವೃತ್ತ ಪ್ರಾಂಶುಪಾಲ ಪ್ರೊ. ಕೆ. ಬಾಲಕೃಷ್ಣ ಗಟ್ಟಿ ನಿಧನ

June 12, 2026
1 2 3 … 1,964 Next
Automatic YouTube Gallery
Error 500 Internal error encountered. : backendError
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version