UN NETWORKS
ತೊಕ್ಕೊಟ್ಟು: ಕಾಶ್ಮೀರದ ಪುಲ್ವಾನಾದಲ್ಲಿ ನಡೆದ ಉಗ್ರದಾಳಿಗೆ ಪ್ರತಿಯಾಗಿ ಭಾರತೀಯ ವೀರ ಯೋಧರು ಪಾಕಿಸ್ತಾನಕ್ಕೆ ನುಗ್ಗಿ ಉಗ್ರರನ್ನು ನಾಶಗೊಳಿಸಿದ ಹಿನ್ನೆಲೆಯಲ್ಲಿ ಮಂಗಳವಾರ ಉಳ್ಳಾಲ ಬ್ಲಾಕ್ ಕಾಂಗ್ರೆಸ್ ವತಿಯಿಂದ ತೊಕ್ಕೊಟ್ಟು ಜಂಕ್ಷನ್ ನಲ್ಲಿ ವಿಜಯೋತ್ಸವ ನಡೆಯಿತು.
ಈ ಸಂದರ್ಭ ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಂತೋಷ್ ಶೆಟ್ಟಿ ಅಸೈಗೋಳಿ ಮಾತನಾಡಿ, ನಮ್ಮ ದೇಶದ ವೀರಯೋಧರು ಪಾಕಿಸ್ತಾನಕ್ಕೆ ನುಗ್ಗಿ ಉಗ್ರರನ್ನು ಹತ್ಯೆಗೈದಿದ್ದು ನಿಜಕ್ಕೂ ಹೆಮ್ಮೆಯ ವಿಚಾರ. ದೇಶದ ವಿಚಾರ ಬಂದಾಗ ಕಾಂಗ್ರೆಸ್ ಪಕ್ಷಾತೀತವಾಗಿ ಬೆಂಬಲ ನೀಡಲಿದ್ದು ಯೋಧರಿಗೆ ಧೈರ್ಯ ತುಂಬಲಿದೆ ಎಂದು ಹೇಳಿದರು. ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಹ್ಮಾನ್ ಕೋಡಿಜಾಲ್, ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷರಾದ ಮುಸ್ತಫಾ ಮಲಾರ್, ಸುರೇಶ್ ಭಟ್ನಗರ, ಮಾಜಿ ಕೌನ್ಸಿಲರ್ ಗಳಾದ ಉಸ್ಮಾನ್ ಕಲ್ಲಾಪು, ಮುಸ್ತಫಾ ಅಬ್ದುಲ್ಲಾ, ಮುಖಂಡರಾದ ಶ್ರೀನಿವಾಸ್ ಶೆಟ್ಟಿ ಪುಲ್ಲು, ಉಮ್ಮರ್ ಪಜೀರ್, ದಿನೇಶ್ ಕುಂಪಲ, ಬಾಝಿಲ್ ಡಿಸೋಜ, ರಫೀಕ್ ಅಂಬ್ಲಮೊಗರು, ಬಶೀರ್ ಉಂಬುದ, ಪದ್ಮನಾಭ ಗಟ್ಟಿ, ಅಬ್ದುಲ್ ರಹ್ಮಾನ್ ಕುತ್ತಾರ್ ಇನ್ನಿತರರು ಉಪಸ್ಥಿತರಿದ್ದರು.


