UN NETWORKS
ಮಂಗಳೂರು : ಮುಂಬರುವ ಲೋಕಸಭಾ ಚುನಾವಣೆಗೆ ಜಿಲ್ಲೆಯಲ್ಲಿ ನಾನು ಅಭ್ಯರ್ಥಿಯಲ್ಲ ಎಂದು ರಾಜ್ಯ ನಗರಾಭಿವೃದ್ಧಿ ಸಚಿವ ಯು.ಟಿ.ಖಾದರ್ ಹೇಳಿದ್ದಾರೆ.ನಗರದ ಸರ್ಕ್ಯೂಟ್ ಹೌಸ್‌ನಲ್ಲಿಂದು ಹಮ್ಮಿಕೊಂಡ ಸುದ್ದಿಗೋಷ್ಠಿಯಲ್ಲಿ ಮಾಧ್ಯಮದವರ ಪ್ರಶ್ನೆಯೊಂದಕ್ಕೆ ಅವರು ಸಚಿವರು ಈ ರೀತಿ ಪ್ರತಿಕ್ರಿಯಿಸಿದರು.
*ಸೋಮೇಶ್ವರ-ಉಚ್ಚಿಲ ಕಡಲ್ಕೊರೆತ ತಡೆಗೋಡೆ ಕಾಮಗಾರಿ ಮಾ.1ರಿಂದ ಆರಂಭ
ಮುಕ್ಕಚ್ಚೇರಿ-ಸೋಮೇಶ್ವರ-ಉಚ್ಚಿಲ-ತಲಪಾಡಿ ಸಮುದ್ರ ಕಿನಾರೆಯಲ್ಲಿ ಕಡಲ್ಕೊರೆತ ತಡೆಗೋಡೆ ಕಾಮಗಾರಿ ಮಾರ್ಚ್ ಒಂದರಿಂದ ಚಾಲನೆಗೊಳ್ಳಲಿದೆ ಎಂದು ಸಚಿವ ಖಾದರ್ ಹೇಳಿದರು.
*ನಗರದಲ್ಲಿ ಪ್ರಾಪರ್ಟಿ ಕಾರ್ಡ್ ಕಡ್ಡಾಯಗೊಳಿಸುವ ಅವಧಿಯನ್ನು ಇನ್ನೂ ಮೂರು ತಿಂಗಳು ವಿಸ್ತರಿಸಲಾಗಿದೆ. ಇದಕ್ಕೆ ಸಂಬಂಧಿಸಿದ ತಾಂತ್ರಿಕ ಸಮಸ್ಯೆ ನಿವಾರಣೆಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಮುಂದಿನ ಹಂತದಲ್ಲಿ ಸೂಕ್ತ ಸಮಯ ನಿಗದಿಪಡಿಸಲಾಗುವುದು ಎಂದು ಸಚಿವರು ತಿಳಿಸಿದರು.