UN NETWORKS
ಇರಾ : ಇರಾ ಗ್ರಾಮದ ಬಾಳೆಪುಣಿ-ಬಡದಲ-ಎರ್ಮಾಜೆ ಸಂಪರ್ಕಿಸುವ ಕಾಂಕ್ರೀಟಿಕೃತ ರಸ್ತೆಯನ್ನು ನಗರಾಭಿವೃಧ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಮಂಗಳವಾರ ಉದ್ಘಾಟಿಸಿದರು.
ಬಂಟ್ವಾಳ ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಚಂದ್ರಹಾಸ್ ಕರ್ಕೇರ, ಉಪಾಧ್ಯಕ್ಷ ಅಬ್ಬಾಸ್ ಅಲಿ, ಸದಸ್ಯ ಹೈದರ್ ಕೈರಂಗಳ, ಕುರ್ನಾಡು ಜಿಲ್ಲಾ ಪಂಚಾಯಿತಿ ಕ್ಷೇತ್ರ ಸದಸ್ಯೆ ಮಮತಾ ಡಿ .ಎಸ್ ಗಟ್ಟಿ, ಇರಾ ಗ್ರಾಮ ಪಂಚಾಯಿತಿ ಅಧ್ಯಕ್ಷ ಅಬ್ದುಲ್ ರಝಾಕ್ ಕುಕ್ಕಾಜೆ, ಮುಡಿಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕಾಜವ, , ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಜಲೀಲ್ ಮೋಟುಗೋಳಿ, ಉಪಾಧ್ಯಕ್ಷ ನಾಸಿರ್ ನಡುಪದವು, ಇರಾ ಗ್ರಾಮ ಪಂಚಾಯಿತಿ ಸದಸ್ಯರುಗಳಾದ ಎಂ.ಬಿ. ಉಮ್ಮರ್ ಹಾಗೂ ಮೊಯ್ದೀನ್ ಕುಂಞಿ, ಮಾಜಿ ಸದಸ್ಯ ಸಿ. ಎಚ್. ಮಹಮ್ಮದ್, ಕಾಂಗ್ರೆಸ್ ಮುಖಂಡರುಗಳಾದ ಪದ್ಮನಾಭ ನರಿಂಗಾನ, ನಾಸಿರ್ ಹಾಗೂ ಅರುಣ್ ಡಿಸೋಜ ಮತ್ತು ವಲಯ ಕಾಂಗ್ರೆಸ್ ಅಧ್ಯಕ್ಷ ಅನಿಲ್ ಕುಮಾರ್ ಸೂತ್ರಬೈಲ್ ಉಪಸ್ಥಿತರಿದ್ದರು.