UN NETWORKS
ಇರಾ : ಇರಾ ಗ್ರಾಮದ ಕುಕ್ಕಾಜೆ ತೋಟ-ಕಾಪಿಕಾಡು ಹಾಗೂ ದರ್ಬೆ-ಸುವರ್ಣಬೈಲು ರಸ್ತೆ ಕಾಂಕ್ರೀಟಿಕರಣ ಕಾಮಗಾರಿಯನ್ನು ಕರ್ನಾಟಕ ಸರ್ಕಾರದ ನಗರಾಭಿವೃದ್ಧಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು. ಟಿ. ಖಾದರ್ ಉದ್ಘಾಟಿಸಿದರು.
ಬಂಟ್ವಾಳ ತಾಲೂಕು ಪಂಚಾಯಿತಿ ಅಧ್ಯಕ್ಷ ಚಂದ್ರಹಾಸ್ ಕರ್ಕೇರ, ಉಪಾಧ್ಯಕ್ಷರಾದ ಅಬ್ಬಾಸ್ ಅಲಿ, ಸದಸ್ಯ ಹೈದರ್ ಕೈರಂಗಳ, ಕುರ್ನಾಡು ಜಿಲ್ಲಾ ಪಂಚಾಯಿತಿ ಕ್ಷೇತ್ರ ಸದಸ್ಯೆ ಮಮತಾ ಡಿ. ಎಸ್ ಗಟ್ಟಿ, ಗ್ರಾಮ ಪಂಚಾಯಿತಿ ಅಧ್ಯಕ್ಷಅಬ್ದುಲ್ ರಝಾಕ್ ಕುಕ್ಕಾಜೆ, ಮುಡಿಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕಾಜವ, ಪ್ರಧಾನ ಕಾರ್ಯದರ್ಶಿ ಅಬ್ದುಲ್ ಜಲೀಲ್ ಮೋಂಟುಗೋಳಿ, ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ನಾಸಿರ್, ಗ್ರಾಮ ಪಂಚಾಯಿತಿ ಸದಸ್ಯರಾದ ಎಂ.ಬಿ’ ಉಮ್ಮರ್, ಮೊಯ್ದೀನ್ ಕುಂಞ, ಸ್ಥಳದಾನಿ ರಾಮಣ್ಣ, ಸುರೇಶ್, ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಸಿ. ಎಚ್. ಮಹಮ್ಮದ್, ಪದ್ಮನಾಭ ನರಿಂಗಾನ, ನಾಸಿರ್, ಅರುಣ್ ಡಿ ಸೋಜ ಮತ್ತು ವಲಯ ಕಾಂಗ್ರೆಸ್ ಅಧ್ಯಕ್ಷ ಅನಿಲ್ ಕುಮಾರ್ ಸೂತ್ರಬೈಲ್ ಉಪಸ್ಥಿತರಿದ್ದರು.




