UN NETWORKS
ಉಳ್ಳಾಲ : ವಿದಾನಸಭಾ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಕಾಂಗ್ರೆಸ್ ಒಂದೇ ಸ್ಥಾನ ಪಡೆದಿದೆ ಎನ್ನುವ ಕಾರಣಕ್ಕೆ ಧೃತಿಗೆಡಬೇಡಿ, ಈ ಚುನಾವಣೆಯಲ್ಲಿ ಹೇಡಿಗಳದೆ ಧೈರ್ಯ, ಆತ್ಮವಿಶ್ವಾಸದಿಂದ ಪಕ್ಷದ ಅಭ್ಯರ್ಥಿ ಪರ ಕೆಲಸ ಮಾಡಿ ಅತ್ಯಧಿಕ ಮತಗಳ ಮುನ್ನುಡೆ ದೊರಕಿಸಿ ಎಂದು ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಈಶ್ವರ್ ಉಳ್ಳಾಲ್ ಕರೆ ನೀಡಿದರು.
ಉಳ್ಳಾಲ ಬ್ಲಾಕ್ ಅಲ್ಪಸಂಖ್ಯಾತ ವಿಭಾಗದ ಆಶ್ರಯದಲ್ಲಿ ಸೋಮವಾರ ಕಲ್ಲಾಪುವಿನಲ್ಲಿ ನಡೆದ ಕಾರ್ಯಕರ್ತರ ಸಭೆ ಮತ್ತು ಹಿರಿಯ ಕಾರ್ಯಕರ್ತರ ಸನ್ಮಾನ ಸಮಾರಂಭದಲ್ಲಿ ಮಾತನಾಡಿದರು.ಇದೀಗ ಉಳ್ಳಾಲವನ್ನು ತಾಲೂಕು ಮಾಡುವ ಮೂಲಕ ಕ್ಷೇತ್ರ ಸದೃಢವಾಗಿ ಬೆಳೆಯುವಂತಾಗಿದೆ. ಲೋಕಸಭಾ ಚುನಾವಣೆ ಘೋಷಣೆ ಆಗಿರುವುದರಿಂದ ಕಾರ್ಯಕರ್ತರು ಜಾಗೃತರಾಗಿರಬೇಕು. ಮತ ಕೇಳುವುದು ಹೇಗೆ ಎನ್ನುವ ಬಗ್ಗೆ ಯೋಜನೆ ರೂಪಿಸಬೇಕು ಎಂದು ಹೇಳಿದರು.ಕಾಂಗ್ರೆಸ್ ಅಲ್ಪಸಂಖ್ಯಾತ ವಿಭಾಗ ಅಧ್ಯಕ್ಷ ಉಸ್ಮಾನ್ ಕಲ್ಲಾಪು ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್, ತಾಲೂಕು ಪಂಚಾಯಿತಿ ಅಧ್ಯಕ್ಷ ಮೊಹಮ್ಮದ್ ಮೋನು, ಸದಸ್ಯ ಅಬೂಬಕ್ಕರ್ ಸಿದ್ದೀಕ್ ಕೊಳಂಗೆರೆ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಂತೋಷ್ ಶೆಟ್ಟಿ ಅಸೈಗೋಳಿ, ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಹ್ಮಾನ್ ಕೋಡಿಜಾಲ್, ಸಂಘಟನಾ ಕಾರ್ಯದರ್ಶಿಗಳಾದ ಸಲೀಂ ಮೇಗಾ, ಇಕ್ಬಾಲ್ ಸಾಮಾನಿಗೆ, ನಗರಸಭಾ ಸದಸ್ಯ ಅಯೂಬ್ ಮಂಚಿಲ, ಮಾಜಿ ಸದಸ್ಯ ಮುಸ್ತಫಾ ಅಬ್ದುಲ್ಲಾ, ಮುಖಂಡರಾದ ಎಂ.ಜಿ.ಹೆಗ್ಡೆ, ರಮೇಶ್ ಶೆಟ್ಟಿ, ಫೈರೋಝ್ ಉಳ್ಳಾಲ್, ಝಕರಿಯಾ ಮಲಾರ್ ಇನ್ನಿತರರು ಉಪಸ್ಥಿತರಿದ್ದರು.ಅಬ್ದುಲ್ ರಝಾಕ್ ಕುಕ್ಕಾಜೆ ಕಾರ್ಯಕ್ರಮ ನಿರೂಪಿಸಿದರು.


