UN NETWORKS
ನಾಟೆಕಲ್: ನಾಟೆಕಲ್ ಕಣಚೂರು ಆಸ್ಪತ್ರೆ ಎದುರುಗಡೆ ಎರಡನೇ ದಿನವೂ ಲೋಕೋಪಯೋಗಿ ಇಲಾಖೆ, ಕೋಟೆಕಾರು ಪಟ್ಟಣ ಪಂಚಾಯಿತಿ ವ್ಯಾಪ್ತಿಯಿಂದ ತೆರವು ಕಾರ್ಯಾಚರಣೆ ಮುಂದುವರಿದಿದೆ. ಗುರುವಾರ ಸಂಜೆವರೆಗೂ ಅಂಗಡಿ ಮಾಲೀಕರು ಸಮಯವಕಾಶ ಕೇಳಿದ ಹಿನ್ನೆಲೆಯಲ್ಲಿ ಕೆಲವು ಅಂಗಡಿಗಳನ್ನು ಹಾಗೆಯೇ ಬಿಡಲಾಗಿದೆ. ಇಂದು ತೆರವುಗೊಳಿಸುವುದಾಗಿ ತಿಳಿಸಿದ್ದ ಅಂಗಡಿ ಮಾಲೀಕರ ಶೀಟುಗಳನ್ನು ಜೆಸಿಬಿ ಮೂಲಕ ತೆರವುಗೊಳಿಸಲಾಗಿದೆ.

ಅಂಗಡಿ ಮಾಲೀಕರು ವಿರೋಧ ವ್ಯಕ್ತಪಡಿಸಿದರೂ, ಲೋಕೋಪಯೋಗಿ ಇಲಾಖೆ ಅಧಿಕಾರಿ ಚುನಾವಣಾ ಅಧಿಕಾರಿ ಆದೇಶ ಇರುವುದರ ಹಿನ್ನೆಲೆಯಲ್ಲಿ ತೆರವು ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದಿದ್ದಾರೆ. ಗುರುವಾರ ಸಂಜೆಯೊಳಗೆ ತೆರವುಗೊಳಿಸದೇ ಇದ್ದಲ್ಲಿ ತಡರಾತ್ರಿ ಮತ್ತೆ ಜೆಸಿಬಿ ಮೂಲಕ ತೆರವು ಕಾರ್ಯಾಚರಣೆ ನಡೆಸುವುದಾಗಿ ಲೋಕೋಪಯೋಗಿ ಇಲಾಖೆ ಇಂಜಿನಿಯರ್ ದಾಸ್ ಪ್ರಕಾಶ್ ತಿಳಿಸಿದ್ದಾರೆ.

ಸ್ಥಳದಲ್ಲಿ ಕೊಣಾಜೆ ಸಿಪಿಐ ರವಿ ನಾಯಕ್, ಎಸ್.ಐ ಉಮೇಶ್, ಕೋಟೆಕಾರು ಪಟ್ಟಣ ಪಂಚಾಯಿತಿ ಪೌರಾಯುಕ್ತೆ ರೂಪಕಲಾ ಕಾರ್ಯಾಚರಣೆ ವೇಳೆ ಉಪಸ್ಥಿತರಿದ್ದರು.
Like this:
Like Loading...