UN NETWORKS
ಕೊಣಾಜೆ: ವಿಜ್ಞಾನ ಕ್ಷೇತ್ರದಲ್ಲಿ ಸಸ್ಯಗಳ ವಿಕಾಸದಲ್ಲಿ ಸಂಶೋಧನೆ ನಡೆಸಲು ಜಗತ್ತಿನಾದ್ಯಂತ ವಿಪುಲ ಅವಕಾಶಗಳಿದ್ದು ಯುವ ವಿಜ್ಞಾನಿಗಳು ಇಂತಹ ಅವಕಾಶಗಳನ್ನು ಬಳಸಿಕೊಂಡು ಮುನ್ನಡೆಯಬೇಕು ಎಂದು ಹೈದರಾಬಾದ್ ಯೋಗಿ ವೆಮನಾ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಡಾ.ಅರ್ಜುಲ ರಾಮಚಂದ್ರ ರೆಡ್ಡಿ ಅವರು ಅಭಿಪ್ರಾಯಪಟ್ಟರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಮಂಗಳೂರು ವಿವಿ ಪ್ರಭಾರ ಕುಲಪತಿ ಪ್ರೊ.ಕಿಶೋರಿ ನಾಯಕ್ ಅವರು, ನಿರಂತರವಾದ ಓದುವಿಕೆಯು ನಮ್ಮಲ್ಲಿ ಜ್ಞಾನ ಕೌಶಲವನ್ನು ಹೆಚ್ಚಿಸುವ ಪರಿಣಾಮಕಾರಿ ಅಸ್ತ್ರವಾಗಿದೆ. ಇಂದು ವಿಜ್ಞಾನ ಕ್ಷೇತ್ರ ಸೇರಿದಂತೆ ಸಂಶೋಧನೆಗೆ ಹೆಚ್ಚಿನ ಪ್ರೋತ್ಸಾಹಗಳು ಸಿಗುತ್ತಿದ್ದು ವಿದ್ಯಾರ್ಥಿಗಳು, ಯುವ ಸಮುದಾಯ ಇಂತಹ ಅವಕಾಶಗಳನ್ನು ಬಳಸಿಕೊಂಡು ಸಮಾಜಕ್ಕೆ ತಮ್ಮದೇ ಆದ ಕೊಡುಗೆ ನೀಡುವಂತಾಗಬೇಕು ಎಂದು ಹೇಳಿದರು.ಕಾರ್ಯಕ್ರಮದಲ್ಲಿ ವಿಚಾರಸಂಕಿರಣದ ಸಂಯೋಜಕಿ ಪ್ರೊ.ಮೋನಿಕಾ ಸದಾನಂದ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಸಂಶೋಧನೆಯ ಮಹತ್ವದ ಬಗ್ಗೆ ಅರಿತುಕೊಳ್ಳಲು ಇಂತಹ ವಿಚಾರಸಂಕಿರಣಗಳು ಪರಿಣಾಮಕಾರಿಯಾಗಿದ್ದು ಮಾತ್ರವಲ್ಲದೆ ಸಂಶೋಧನಾ ತಜ್ಞರೊಂದಿಗೆ ಬೆರೆಯಲು ಅವಕಾಶವಾಗುತ್ತದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯ ಪರಿಸರ ವಿಜ್ಞಾನಿ ಪ್ರೊ.ಟ.ವಿ.ರಾಮಚಂದ್ರ, ಕೊಚ್ಚಿ ಸಾಗರ ಜೈವಿಕ ತಂತ್ರಜ್ಞಾನ ಕ್ಷೇತ್ರದ ವಿಜ್ಞಾನಿ ಡಾ.ಕಾಜಲ್ ಚಕ್ರಬೋರ್ಟಿ ಮೊದಲಾದವರು ಉಪಸ್ಥಿತರಿದ್ದರು.