ಉಳ್ಳಾಲ್ ನ್ಯೂಸ್ ನೆಟ್ ವರ್ಕ್
ಉಳ್ಳಾಲ: ಗುರುವಾರ ಸುರಿದ ಮಳೆಗೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸ್ವಲ್ಪ ಕಾಲ ಸಂಚಾರ ಆಸ್ತವ್ಯಸ್ತಗೊಂಡಿತು.
ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದು, ತೊಕ್ಕೊಟ್ಟು ಮತ್ತು ಕೋಟೆಕಾರ್ನಲ್ಲಿ ಹೆದ್ದಾರಿಯಲ್ಲಿ ಮಳೆ ನೀರು ನಿಂತಿದ್ದರಿಂದ ಸಂಚಾರದಲ್ಲಿ ಅಸ್ತವ್ಯಸ್ತಗೊಂಡಿದ್ದು, ಬಳಿಕ ಜೆಸಿಬಿ ಮೂಲಕ ನೀರನ್ನು ತೆರವು ಮಾಡಲಾಯಿತು.

ಉಳ್ಳಾಲ ಸೇರಿದಂತೆ ಸುತ್ತಮುತ್ತಲಿನಲ್ಲಿ ಗುಡುಗು ಸಹಿತ ಧಾರಾಕಾರವಾಗಿ ಮಳೆ ಸುರಿದಿದೆ. ಮಳೆಯಿಂದಾಗಿ ಮದುವೆ ಸೇರಿದಂತೆ ಶುಭ ಕಾರ್ಯಗಳಿಗೆ ಬರುವ ಜನರು ಮಳೆಯಿಂದಾಗಿ ಪರದಾಡುವಂತಾಯಿತು.



