UN NETWORKS
ಉಳ್ಳಾಲ : ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತದಾರರಲ್ಲಿ ಅರಿವು ಮೂಡಿಸಲು ಮಾನವ ಸರಪಳಿ ಹಾಗೂ ಇತರ ಕಾರ್ಯಕ್ರಮಗಳ ಪೂರ್ವ ಸಿದ್ದತಾ ಸಭೆ ಬುಧವಾರ ಉಳ್ಳಾಲ ನಗರಸಭೆಯ ಸಭಾಂಗಣದಲ್ಲಿ ನಡೆಯಿತು.
ದ.ಕ.ಜಿಲ್ಲಾ ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಡಾ.ಸೆಲ್ವಮಣಿ ಅಧ್ಯಕ್ಷತೆ ವಹಿಸಿದ್ದರು. ಉಳ್ಳಾಲ ನಗರಸಭಾ ಪೌರಾಯುಕ್ತೆ ವಾಣಿವಿ.ಆಳ್ವ, ಸಂತ ಸೆಬಾಸ್ಟಿಯನ್ ಧರ್ಮ ಕೇಂದ್ರದ ಪ್ರಧಾನ ಧರ್ಮಗುರು ಫಾ.ಜೆ.ಬಿ.ಸಲ್ದಾನಾ, ಮೊಗವೀರ ಸಮಾಜದ ಮಾಜಿ ಅಧ್ಯಕ್ಷ ಸದಾನಂದ ಬಂಗೇರ, ಮನೋಜ್ ಮೊಗವೀರ ಪಟ್ನ, ಇಸ್ಮಾಯಿಲ್ ಮುಕ್ಕಚ್ಚೇರಿ, ಸುಧಾಕರ್, ಯತೀಶ್ ಬೈಕಂಪಾಡಿ, ಉಳ್ಳಾಲ ಕ್ರಿಕೆಟ್ ಬೋರ್ಡ್ ಅಧ್ಯಕ್ಷ ಖಲೀಲ್, ಮಾಜಿ ನಗರಸಭಾಧ್ಯಕ್ಷ ಹುಸೈನ್ ಕುಂಞಮೋನು, ನಗರಸಭಾ ಸದಸ್ಯರು, ಅಂಗನವಾಡಿ ಕಾರ್ಯಕರ್ತೆಯರು, ಸಂಘ ಸಂಸ್ಥೆಯ ಪ್ರಮುಖರು ಭಾಗವಹಿಸಿದ್ದರು.


