ಉಳ್ಳಾಲ್ ನ್ಯೂಸ್ ನೆಟ್ ವರ್ಕ್
ತೊಕ್ಕೊಟ್ಟು: 8ರಿಂದ 15 ವರ್ಷದವರೆಗಿನ ಮಕ್ಕಳಿಗೆ ಅಯೋಜಿಸಲಾಗಿದ್ದ ಬೇಸಿಗೆ ಶಿಬಿರ ಉಳ್ಳಾಲದಲ್ಲಿ ಇತ್ತೀಚೆಗೆ ತೊಕ್ಕೊಟ್ಟಿನಲ್ಲಿ ಸಮಾರೋಪಗೊಂಡಿತು.
ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಧಾರವಾಡ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಮಂಗಳೂರು ಗ್ರಾಮಾಂತರ, ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮಂಗಳೂರು ದಕ್ಷಿಣ ಇದರ ಸಂಯುಕ್ತ ಆಶ್ರಯದಲ್ಲಿ ಶಿಬಿರ ನಡೆಯಿತು.
ಸಮಾರೋಪ ಸಮಾರಂಭದ ಸಭಾ ಕಾರ್ಯಕ್ರಮ ಉಳ್ಳಾಲ ನಗರಸಭೆ ಅಧ್ಯಕ್ಷೆ ಗಿರಿಜಾ ಎಂ.ಬಾೈ ಉದ್ಘಾಟಿಸಿದರು. ಉಪಾಧ್ಯಕ್ಷೆ ರಝಿಯಾ ಇಬ್ರಾಹಿಂ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ಯಾಮಲ, ಸಂಪನ್ಮೂಲ ವ್ಯಕ್ತಿ ಸುರೇಖ, ಪ್ರಕಾಶ್, ಹರಿಶ್ಚಂದ್ರ, ಗಂಗಾಧರ್, ತೊಕ್ಕೊಟ್ಟು ಅಂಗನವಾಡಿ ಕಾರ್ಯಕರ್ತೆ ರೋಹಿಣಿ, ಕೌನ್ಸಿಲರ್ ಶಶಿಕಲಾ ಶೆಟ್ಟಿ, ಸುರೇಖ, ಶ್ರೀಕಾಂತ್ ಕೊಂಡಾಣ, ಮೊದಲಾದವರು ಉಪಸ್ಥಿತರಿದ್ದರು.
ಮಂಗಳೂರು ಗ್ರಾಮಾಂತರ ಶಿಶು ಅಭಿವೃದ್ಧಿ ಯೋಜನೆ ಮೇಲ್ವಿಚಾರಕಿ ಕಲ್ಪನಾ ಸ್ವಾಗತಿಸಿದರು. ಶಂಕರಿ ವಂದಿಸಿದರು. ರಾಯಿಫ ಕಾರ್ಯಕ್ರಮ ನಿರೂಪಿಸಿದರು.


