UN NETWORKS
ಹರೇಕಳ : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಉಳ್ಳಾಲ ಸ್ಥಳೀಯ ಸಂಸ್ಥೆ, ರಾಮಕೃಷ್ಣ ಪ್ರೌಢ ಶಾಲೆ ಮತ್ತು ಪ್ರಾಥಮಿಕ ಶಾಲಾ ಹಳೇ ವಿದ್ಯಾರ್ಥಿ ಸಂಘ ಮತ್ತು ಜೆಸಿಐ ಮಂಗಳಗಂಗೋತ್ರಿ ಕೊಣಾಜೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಶ್ರೀ ರಾಮಕೃಷ್ಣ ಪ್ರೌಢ ಶಾಲೆ ಹರೇಕಳ ಇಲ್ಲಿ ಚಿಣ್ಣರ ಚಿಲುಮೆ ಬೇಸಿಗೆ ಶಿಬಿರದಲ್ಲಿ ಮಾತಾ ಅಮೃತಾನಂದಮಯಿ ಮಠ ಬೋಳೂರು ಇವರ ವತಿಯಿಂದ ಸ್ವಚ್ಛ ಭಾರತ (ಅಮಲ ಭಾರತ) ಕಾರ್ಯಕ್ರಮ ನಡೆಯಿತು.

ಇದರ ಸಂಪನ್ಮೂಲ ವ್ಯಕ್ತಿಯಾಗಿ ಪರಿಸರವಾದಿ ಪಿ.ಕೃಷ್ಣಪ್ಪರವರು ಶಿಬಿರಾರ್ಥಿಗಳಿಗೆ ಪರಿಸರ ಮತ್ತು ಸ್ವಚ್ಛತೆಯ ಬಗ್ಗೆ ತರಬೇತಿ ನೀಡುವುದರೊಂದಿಗೆ ಕವನವನ್ನು ವಾಚಿಸಿದರು. ಈ ಸಂದರ್ಭದಲ್ಲಿ ಲಕ್ಷಣಫಲ ವೃಕ್ಷವನ್ನು ಶಾಲಾ ವಠಾರದಲ್ಲಿ ನೆಟ್ಟು ನೀರೆರೆಯಲಾಯಿತು. ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯರಾದ ಕೆ. ರವೀಂದ್ರ ರೈ ವಹಿಸಿದರು. ಮುಖ್ಯ ಅತಿಥಿಗಳಾಗಿ ಜೆಸಿಐ ಮಂಗಳಗಂಗೋತ್ರಿ ಕೊಣಾಜೆ ಇದರ ಅಧ್ಯಕ್ಷೆ ಪವಿತ್ರ ಗಣೇಶ್, ಶಾಲಾ ಅಧ್ಯಾಪಕರಾದ ರವಿಶಂಕರ್, ಮೋಹಿನಿ, ಶಿವಕುಮಾರ್, ಸ್ಮಿತಾ ಉಪಸ್ಥಿತರಿದ್ದರು. ಶಿಬಿರದ ನಿರ್ದೇಶಕರಾದ ತ್ಯಾಗಂ ಹರೇಕಳ ಸ್ವಾಗತಿಸಿದರು.


