Site icon Ullalavani

ಮಂಗಳೂರಿನ ಬಲ್ಮಠದಲ್ಲಿ ಮತ ಚಲಾಯಿಸಿದ ಮೈತ್ರಿ ಅಭ್ಯರ್ಥಿ ಮಿಥುನ್ ರೈ

UN NETWORKS

ಮಂಗಳೂರು : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ವಿವಿಧೆಡೆ ಮುಂಜಾನೆಯಿಂದಲೇ ಮತದಾನ ಪ್ರಕ್ರಿಯೆ ಚುರುಕಿನಿಂದ ಆರಂಭಗೊಂಡಿದೆ.

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಮಿಥುನ್ ರೈ ತಮ್ಮ ಹಕ್ಕು ಚಲಾಯಿಸಿದ್ದಾರೆ. ನಗರದ ಬಲ್ಮಠದಲ್ಲಿ ಮತದಾನ ಮಾಡಿದ್ದು, ಇತರ ಮತದಾರರಿಗೆ ಸಾಥ್ ನೀಡುತ್ತಿದ್ದಾರೆ. ಮಂಗಳೂರಿನ ಬಲ್ಮಠ ಮತಗಟ್ಟೆಯಲ್ಲಿ ಬೆಳಿಗ್ಗೆಯೇ ಮತದಾನಕ್ಕೆ ಮತದಾರರು ಸರತಿ ಸಾಲಿನಲ್ಲಿ ನಿಂತಿದ್ದು, ಚುರುಕಿನಿಂದ ಮತದಾನ ನಡೆಯುತ್ತಿದೆ. ಪ್ರಜಾಪ್ರಭುತ್ವದ ಹಬ್ಬ, ಭವಿಷ್ಯಕ್ಕಾಗಿ ಪ್ರಜೆಗಳು ತಮ್ಮ ಪವರ್ ತೋರಿಸುವ ಅವಕಾಶ ಬಂದಿದೆ. ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಮತಗಟ್ಟೆಗಳಲ್ಲಿ ಬಹಳ ಉತ್ಸಾಹದಿಂದ ಮತದಾರ ಪ್ರಭುಗಳು ಮತದಾನ ಮಾಡುತ್ತಿದ್ದಾರೆ. ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮತದಾನ ಪ್ರಕ್ರಿಯೆ ನಡೆಯಲಿದೆ.

ಜಾಹೀರಾತು
Exit mobile version