UN NETWORKS
ಇರಾ : ಇರಾ ತಾಳಿತ್ತಬೆಟ್ಟು ದ.ಕ.ಜಿ.ಪಂ.ಹಿ.ಪ್ರಾ ಶಾಲೆಯಲ್ಲಿ ಶಾಲಾ ಪ್ರಾರಂಬೋತ್ಸವವನ್ನು ವಿಭಿನ್ನ ರೀತಿಯಲ್ಲಿ ನಡೆಯಿತು.

ಹೊಸ ದಾಖಲಾತಿ ವಿದ್ಯಾರ್ಥಿಗಳನ್ನು ಕಳಸ, ಬ್ಯಾಂಡ್‍ವಾದನದೊಂದಿಗೆ ಬಿಸ್ಕತ್ ಕೊಟ್ಟು ಪನ್ನೀರು ಬರ ಮಾಡಿಕೊಳ್ಳಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಇರಾ ಗ್ರಾ.ಪಂ. ಅಧ್ಯಕ್ಷ ಅಬ್ದುಲ್ ರಝಾಕ್ ಕುಕ್ಕಾಜೆ ವಹಿಸಿದ್ದರು. ಗ್ರಾಮ ಪಂಚಾಯತ್ ಸದಸ್ಯರುಗಳಾದ ಲೆನ್ನಿ ಡಿ’ಸೋಜಾ, ಎಸ್‍ಡಿಎಮ್‍ಸಿ ಉಪಾಧ್ಯಕ್ಷ ಚಂದ್ರಿಕಾ, ಫ್ಲೋರಿನ್ ಡಿ’ಸಿಲ್ವಾ, ಎಸ್‍ಡಿಎಮ್‍ಸಿ ಅಧ್ಯಕ್ಷ ಮುರಳೀಧರ ಭಂಡಾರಿ, ಶಾಲಾ ಮುಖ್ಯ ಶಿಕ್ಷಕಿ ಸುಜಾತ ಟಿ.ಎಸ್ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ 2018-19ನೇ ಸಾಲಿನ ವಿದ್ಯಾರ್ಥಿಗಳಿಗೆ ಹಾಜರಾತಿ ಬಹುಮಾನ, ಶೈಕ್ಷಣಿಕ ಬಹುಮಾನ, ಪಠ್ಯಪುಸ್ತಕ ವಿತರಣೆ ಮಾಡಲಾಯಿತು.
ಶಿಕ್ಷಕ ಜೋನ್ ಅಂತೋನಿ ಫೆರ್ನಾಂಡೀಸ್ ಕಾರ್ಯಕ್ರಮ ನಿರ್ವಹಿಸಿದರು.


