UN NETWORKS
ಕೊಣಾಜೆ: ಪ್ಲಾಸ್ಟಿಕ್ ಹಾಗೂ ತ್ಯಾಜ್ಯಗಳ ಸರಿಯಾದ ನಿರ್ವಹಣೆ ಇಲ್ಲದ ಪರಿಣಾಮ ಇಂದು ಅನೇಕ ಕಡೆಗಳಲ್ಲಿ ಪರಿಸರ ಮಾಲಿನ್ಯಗಳಾಗುತ್ತಿವೆ. ಪರಿಸರದ ಸಂರಕ್ಷಣೆಯ ಬಗ್ಗೆ ನಾವೆಲ್ಲರೂ ಎಚ್ಚೆತ್ತುಕೊಂಡು ಸಮಾಜದಲ್ಲಿ ಈ ನಿಟ್ಟಿನಲ್ಲಿ ಜಾಗೃತಿ ಮೂಡಿಸಬೇಕಾದ ಅಗತ್ಯವಿದೆ ಎಂದು ಬ್ಯಾಂಕ್ ಆಫ್ ಬರೋಡಾದ ವಲಾಯಧ್ಯಕ್ಷರಾದ ಎಂ.ಜೆ.ನಾರಾಯಣ ಅವರು ಹೇಳಿದರು.

ಅವರು ಕೊಣಾಜೆಯ ಬ್ಯಾಂಕ್ ಆಫ್ ಬರೋಡ(ವಿಜಯಾ ಬ್ಯಾಂಕ್) ಹಾಗೂ ಕೊಣಾಜೆ ಗ್ರಾಮ ಪಂಚಾಯಿತಿ ಆಶ್ರಯದಲ್ಲಿ ಶುಕ್ರವಾರ ಗ್ರಾಮ ಪಂಚಾಯಿತಿ ಕಚೇರಿ ಬಳಿ ನಡೆದ ವಿಶ್ವಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಪ್ರಮುಖವಾಗಿ ಪರಿಸರ ಸಂರಕ್ಷಣೆಯ ಬಗ್ಗೆ ವಿದ್ಯಾರ್ಥಿಗಳಲ್ಲಿ ಹಾಗೂ ಯುವ ಸಮುದಾಯಗಳಲ್ಲಿ ಅರಿವು ಮೂಡಿಸುವ ಪ್ರಯತ್ನ ಮಾಡಬೇಕಿದೆ ಎಂದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಮೂಡಾದ ಮಾಜಿ ಅಧ್ಯಕ್ಷ ಇಬ್ರಾಹಿಂ ಕೋಡಿಜಾಲ್ ಅವರು, ಪರಿಸರವು ಸಮತೋಲನವಾಗಿರಬೇಕಾದರೆ ಮರ ಗಿಡಗಳ ಸಂರಕ್ಷಣೆಯೂ ಅಗತ್ಯವಾಗಿದೆ. ವನಸಂಪತ್ತನ್ನು ರಕ್ಷಿಸುವುದರೊಂದಿಗೆ ಪ್ರತಿಯೊಬ್ಬರೂ ಪರಿಸರ ಸಂರಕ್ಷಣೆಯ ಬಗ್ಗೆ ಸ್ವಯಂ ಕಾಳಜಿ ಬೆಳೆಸಿಕೊಳ್ಳಬೇಕು ಎಂದರು.
ಕಾರ್ಯಕ್ರಮದಲ್ಲಿ ಕೊಣಾಜೆ ಗ್ರಾಮ ಪಂಚಾಯಿತಿ ಅಧ್ಯಕ್ಷ ನಝರ್ ಷಾ ಪಟ್ಟೋರಿ, ಬ್ಯಾಂಕ್ನ ರೀಜನಲ್ ಮ್ಯಾನೇಜರ್ ಶಿವರಾಮ್ ಬಿ, ರೀಜನಲ್ ಮ್ಯಾನೇಜರ್ ಚಿದಾನಂದ ಹೆಗ್ಡೆ, ಎಜಿಎಮ್ ರಂಗರಾಜು, ಕೊಣಾಜೆ ಬ್ಯಾಂಕ್ ಮ್ಯಾನೇಜರ್ ಲಕ್ಷ್ಮೀಕಾಂತ್ ನಾಯಕ್, ಪಂಚಾಯಿತಿ ಉಪಾಧ್ಯಕ್ಷೆ ಲಲಿತಾ ಎಸ್.ರಾವ್, ತಾಲೂಕು ಪಂಚಾಯಿತಿ ಸದಸ್ಯೆ ಪದ್ಮಾವತಿ, ಸಮಾಜಸೇವಕ ಪ್ರಸಾದ್ ರೈ ಕಲ್ಲಿಮಾರ್, ರವೀಂದ್ರ ರೈ ಹರೇಕಳ, ಪಂಚಾಯಿತಿ ಸದಸ್ಯರಾದ ಅಚ್ಯುತಗಟ್ಟಿ, ಮುತ್ತುಶೆಟ್ಟಿ, ವೇದಾವತಿ ಗಟ್ಟಿ, ಪ್ರಕಾಶ್, ರವಿ ಅಸೈಗೋಳಿ, ಗುಲಾಬಿ ಮುಖಂಡರಾದ ಇಬ್ರಾಹಿಂ ನಡುಪದವು, ಅಬ್ದುಲ್ ರಹಿಮಾನ್ ಕೋಡಿಜಾಲ್, ಸನತ್, ಸುಧಾಕರ್, ಶಿವಪ್ರಕಾಶ್ , ಚಂದ್ರಹಾಸ್, ಮಹಮ್ಮದ್ ಇಕ್ಬಾಲ್, ಹಸೈನಾರ್, ಎ.ಕೆ.ರಹಿಮಾನ್, ಸಮಾಜ ಸೇವಕಿ ತಪಸ್ಸಮ್, ಹರೀಶ್ ಪೂಜಾರಿ, ರವಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸವಿತಾ, ಕಾರ್ಯದರ್ಶಿ ಶಾಲಿನಿ ಮೊದಲಾದವರು ಉಪಸ್ಥಿತರಿದ್ದರು.


