Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
UllalavaniUllalavani
ಕೊಣಾಜೆ

ವಿದ್ಯಾರ್ಥಿಗಳು ಬಲಿಷ್ಠರಾದಾಗ ದೇಶ ಸಧೃಡ : ಖಾದರ್

UllalaVaniBy UllalaVaniJune 13, 2015No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಉಳ್ಳಾಲ್ ನ್ಯೂಸ್ ನೆಟ್ ವರ್ಕ್

ಕೊಣಾಜೆ : ಕಲಿಕಾ ಕೊಠಡಿಯಲ್ಲಿರುವ ವಿದ್ಯಾರ್ಥಿಗಳು ಬಲಿಷ್ಠರಾಗಿ ಅವರು ದೇಶದ ಸಂಪತ್ತಾದಾಗ ಭಾರತ ಸದೃಡವಾಗಿ ವಿಶ್ವದಲ್ಲಿ ಪ್ರಥಮ ಸ್ಥಾನಕ್ಕೆ ಏರಲು ಸಾಧ್ಯವಿದ್ದು, ವಿಶ್ವವಿದ್ಯಾನಿಲಯಗಳು ವಿದ್ಯಾರ್ಥಿಗಳಿಗೆ ಮಾಹಿತಿ ನೀಡುವ, ವಿಜ್ಞಾನ ಹೆಚ್ಚಿಸುವ ಓಪನ್‍ಹೌಸ್‍ಗಳಂತಹ ಕಾರ್ಯಕ್ರಮಗಳಿಂದ ವಿದ್ಯಾರ್ಥಿಗಳನ್ನು ಬಲಯುತರನ್ನಾಗಿ ಮಾಡಲು ಸಾಧ್ಯ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ.ಖಾದರ್ ಅಭಿಪ್ರಾಯಪಟ್ಟರು.

ಅವರು ಮಂಗಳೂರು ವಿಶ್ವವಿದ್ಯಾನಿಲಯದ ವಿವಿಧ ಸ್ನಾತಕೋತ್ತರ ಪದವಿ ಕೋರ್ಸ್‍ಗಳನ್ನು ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಪರಿಚಯಿಸುವ ಉದ್ಧೇಶದಿಂದ ಕ್ಯಾಂಪಸ್ ನೋಡ ಬನ್ನಿ ಎನ್ನುವ `ಓಪನ್ ಹೌಸ್’ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

 

Open House (2)

Open House (1)

Open House (3)
Open House (5)

Open House (4)

Open House (6)

Open House (7)

Open House (8)

Open House (9)

Open House (10)

Open House (11)

Open House (12)

Open House (13)

Open House (14)

Open House (15)

Open House (16)

Open House (18)

Open House (19)

Open House (20)

ಮಂಗಳೂರು ವಿಶ್ವವಿದ್ಯಾನಿಲಯ ದೇಶದಲ್ಲಿ ಉತ್ತಮ ವಿ.ವಿ. ಎನ್ನುವ ಹೆಸರು ಗಳಿಸುತ್ತಿದ್ದು, ಸಂಶೋಧನೆ ವಿಚಾರದಲ್ಲಿ ದೇಶದ ಟಾಪ್ 50 ವಿ.ವಿ.ಗಳಲ್ಲಿ ಒಂದಾಗಿದೆ. ಮುಂದಿನ ದಿನಗಳಲ್ಲಿ ದೇಶದ 25 ವಿವಿಗಳ ಪಟ್ಟಿಯಲ್ಲಿ ಮಂಗಳೂರು ವಿ.ವಿ.ಬರಲಿ ಎಂದು ಶುಭ ಹಾರೈಸಿದರು.

ಅಧ್ಯಕ್ಷತೆ ವಹಿಸಿದ ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಕೆ. ಭೈರಪ್ಪ ಮಾತನಾಡಿ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ಎಲ್ಲ ಸೌಲಭ್ಯ ಕಲ್ಪಿಸಲಾಗಿದೆ. ವೈಫೈ ಮೂಲಕ ವಾಣಿಜ್ಯ ಪದವಿ ಮತ್ತು ಬಿಬಿಎಂ ಫಲಿತಾಂಶ ಪ್ರಕಟಿಸಲಾಗಿದೆ. ಇಂದಿನಿಂದ ವೆಬ್ ಪೋರ್ಟಲ್ ಗೆ ಪ್ರಾಯೋಗಿಕ ಚಾಲನೆ ನೀಡಲಾಗುವುದು. ವಿವಿಯ ಗ್ರಂಥಾಲಯ, ವಿಜ್ಞಾನ ಕೇಂದ್ರ ಮತ್ತು ಆಡಳಿತ ಕಚೇರಿ ಬಳಿ ವಿವಿಯ ಬಗ್ಗೆ ಸಮಗ್ರ ಮಾಹಿತಿಯ ಕಿಯೋಸ್ಕ್ ಸ್ಥಾಪಿಸಲಾಗುವುದು ಎಂದು ಹೇಳಿದರು.

ಮಂಗಳೂರು ವಿಶ್ವವಿದ್ಯಾನಿಲಯದ ಕುಲಸಚಿವ ಪ್ರೊ.ಯಡಪಡಿತ್ತಾಯ ಸ್ವಾಗತಿಸಿದರು. ಪ್ರೊ. ಎ.ಎಂ.ಖಾನ್ ಕಾರ್ಯಕ್ರಮ ನಿರ್ವಹಿಸಿದರು. ಕಾರ್ಯಕ್ರಮದ ಸಂಯೋಜಕ ಪ್ರೊ. ಕೆ.ಆರ್ ಚಂದ್ರಶೇಖರ್ ವಂದಿಸಿದರು.

ಶುಕ್ರವಾರ ವಿ.ವಿ.ಯಲ್ಲಿ ಕಂಡು ಬಂದ ವಿಚಾರಗಳು

೧.ವಿಶ್ವವಿದ್ಯಾನಿಲಯವನ್ನು ಸಂಪರ್ಕಿಸುವ ಎರಡು ಬಸ್ಸು ತಂಗುದಾಣದಲ್ಲಿ ವಿದ್ಯಾರ್ಥಿಗಳಿಗೆ ಮಾಹಿತಿ ನೀಡುವ ಹೆಲ್ಪ್ ಡೆಸ್ಕ್‍ಗಳು ಸಹಕಾರಿಯಾಗಿತ್ತು.
ಮಂಗಳೂರು ವಿಶ್ವವಿದ್ಯಾನಿಲಯದ ಗ್ರಂಥಾಲಯದಲ್ಲಿ ಮಂಗಳೂರು ವಿವಿ, ವಿ.ವಿ.ಘಟಕ ಕಾಲೇಜುಗಳು ಹಾಗೂ ಕೊಡಗಿನ ಚಿಕ್ಕಅಳುವಾರದಲ್ಲಿರುವ ಪ್ರಾದೇಶಿಕ ಕೇಂದ್ರದಲ್ಲಿರುವ ವಿವಿಧ ಕೋರ್ಸ್, ಸೌಲಭ್ಯಗಳ ಬಗ್ಗೆ ಸಮಗ್ರ ವಿವರವನ್ನು ಕೊಡುವ ಕೌಂಟರ್ ತೆರೆಯಲಾಗಿತ್ತು. ಗ್ರಂಥಾಲಯಕ್ಕೆ ಪ್ರವೇಶಿಸುತ್ತಿದ್ದಂತೆ ಇಂಟರ್‍ನೆಟ್ ಮೂಲಕ ಪಲಿತಾಂಶ ವೀಕ್ಷಣೆಗೆ ಅವಕಾಶ ಮಾಡಿಕೊಡಲಾಗಿದ್ದು ಕಾರ್ಯಕ್ರಮ ನಡೆಯುವ ಎರಡು ದಿನ ಮುಕ್ತವಾಗಿ ವೈಫೈ ಪ್ರಯೋಜನವನ್ನು ಪಡೆಯಲು ವಿದ್ಯಾರ್ಥಿಗಳಿಗೆ ಆವಕಾಶ ಮಾಡಿಕೊಡಲಾಗಿತ್ತು.
೨. ವಿಶ್ವಿದ್ಯಾನಿಲಯ ಕ್ಯಾಂಪಸ್‍ನಲ್ಲಿರುವ ಆಯಾಯ ವಿಭಾಗಗಳಲ್ಲಿ ಕೋರ್ಸುಗಳ ಮಾಹಿತಿ ನೀಡುವುದರೊಂದಿಗೆ, ವಿಭಾಗದ ಕಾರ್ಯ ಚಟುವಟಿಕೆಗಳು, ಪೋಸ್ಟರ್ಸ್ ಮತ್ತು ದೃಶ್ಯ ಮಾದ್ಯಮದ ಮೂಲಕ ವಿದ್ಯಾರ್ಥಿಗಳಿಗೆ ವಿವರಣೆ ನೀಡುತ್ತಿದ್ದರು.
೩.ಬೆಂಗಳೂರು, ಕಾಸರಗೋಡು, ಉಡುಪಿ, ದ.ಕ.ಜಿಲ್ಲೆ ಸೇರಿದಂತೆ ಬೇರೆ ಬೇರೆ ಕಡೆಗಳಿಂದ ವಿದ್ಯಾರ್ಥಿಗಳು ಆಗಮಿಸಿ ಸ್ನಾತಕೋತ್ತರ ಕೋರ್ಸುಗಳ ಮಾಹಿತಿ ಪಡೆದುಕೊಂಡರು.
೪. ವಿಜ್ಞಾನ, ವಾಣಿಜ್ಯ ಸ್ನಾತಕೋತ್ತರ ಪದವಿಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಆಗಮಿಸಿದರೆ, ಕಲಾ ಪದವಿ ವಿಭಾಗಗಳಿಗೆ ಬೇಟಿ ನೀಡಿದ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆ ಇತ್ತು.


ಪ್ರಥಮ ಪ್ರಯತ್ನ ಸಫಲ :
ವಿದೇಶಗಳಲ್ಲಿ ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ವಿದ್ಯಾರ್ಥಿಗಳಿಗೆ ತಮ್ಮ ಆಯ್ಕೆಯ ಕೋರ್ಸುಗಳನ್ನು ಆಯ್ಕೆ ಮಾಡಲು ಓಪನ್ ಹೌಸ್‍ನಂತಹ ಕಾರ್ಯಕ್ರಮಗಳನ್ನು ಅಳವಡಿಸುತ್ತಿದ್ದು, ಕರ್ನಾಟಕದಲ್ಲಿ ಪ್ರಥಮ ಬಾರಿಗೆ ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಆರಂಭಿಸಿದ್ದು, ವಿದ್ಯಾರ್ಥಿಗಳು ಬೇರೆ ಬೇರೆ ವಿಭಾಗಗಳನ್ನು ಸಂಪರ್ಕಿಸಿ ಕೋರ್ಸುಗಳ ಕುರಿತು ಮಾಹಿತಿ ಪಡೆಯುತ್ತಿರುವುದು ಕಂಡು ಬಂತು. ವಿ.ವಿ.ಯ ಪ್ರಥಮ ಪ್ರಯತ್ನ ಸಫಲವಾಗಿದ್ದು, ಹೆಚ್ಚಿನ ವಿಭಾಗಗಳ ಮುಖ್ಯಸ್ಥರು, ಸಂಶೋಧನಾ ವಿದ್ಯಾರ್ಥಿಗಳು ಮಾಹಿತಿ ನೀಡಿದರು. ಕೆಲವೆಡೆ ವಿದ್ಯಾರ್ಥಿಗಳಿಗೆ ಕೆಲವೊಂದು ವಿಭಾಗಗಳು ಯಾವ ಕಡೆ ಇದೆ ಎನ್ನುವ ವಿಚಾರ ತಿಳಿಯದೆ ಗೊಂದಲಕ್ಕೀಡಾದರು.

ಓಪನ್ ಹೌಸ್ ಕಾರ್ಯಕ್ರಮ ಶನಿವಾರವೂ ಮುಂದುವರೆಯಲಿದ್ದು ಸ್ನಾತಕೋತ್ತರ ಶಿಕ್ಷಣ ಆಯ್ಕೆ ನಡೆಸಲು ಈ ಕಾರ್ಯಕ್ರಮ ವಿದ್ಯಾರ್ಥಿಗಳಿಗೆ ಸಹಕಾರಿಯಾಗಲಿದೆ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...
Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಮಂಗಳೂರು ವಿವಿಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ದೃಷ್ಟಿಕೋನದಲ್ಲಿ ಅಭಿವೃದ್ಧಿಯ ಭಾರತ: ವಿಚಾರಸಂಕಿರಣ ಉದ್ಘಾಟನೆ

March 4, 2026

ಹಿದಾಯತ್ ನಗರ ಇಹ್ಸಾನುಲ್ ವಹ್ಹಾಬ್ ಅಲ್ ಮದ್ರಸತುಲ್ ಹಿದಾಯ ಶೇ 100 ಫಲಿತಾಂಶ

March 4, 2026

ಪ್ರೇಮ ವೈಫಲ್ಯ ಹಿನ್ನೆಲೆ; ಒಮಾನ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಸೋಮೇಶ್ವರದ ಯುವಕ

March 4, 2026
Leave A Reply

Advertise
ಸಂಪರ್ಕಿಸಿ

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025

ನೂತನ ಅತ್ಯಾಧುನಿಕ ಫಿಸಿಯೋಥೆರಪಿ ಚಿಕಿತ್ಸಾ ಕ್ಲಿನಿಕ್ ಉದ್ಘಾಟನೆ

November 12, 2025
suddi

ಕಾರ್ಮಿಕ ಸಂಹಿತೆ ವಿರುದ್ಧ ಸಹಾಯಕ ಕಾರ್ಮಿಕ ಆಯುಕ್ತರಿಗೆ ಆಕ್ಷೇಪಣೆ ಸಲ್ಲಿಕೆ

By UllalaVaniMarch 4, 20260

ಮಂಗಳೂರು: ಕಾರ್ಮಿಕ ವಿರೋಧಿ ಸಂಹಿತೆಗಳ ವಿರುದ್ಧ ಆಕ್ಷೇಪಣೆ ಸಲ್ಲಿಕೆ ಹಾಗೂ ಪ್ರತಿಭಟನೆ ಮಂಗಳೂರು ನಗರದ ಸಹಾಯಕ ಕಾರ್ಮಿಕ ಆಯುಕ್ತರ ಕಚೇರಿಯೆದುರು…

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

ಮಂಗಳೂರು : ಪಿ.ಎ. ಕಾಲೇಜಿನ ಆಯಿಷತ್ ಲುತ್‌ಫಾ ನಜಾ B.Sc.ಯಲ್ಲಿ ಪ್ರಥಮ ರ‍್ಯಾಂಕ್

March 4, 2026

ಬಾಲ ಯೇಸುವಿನ ಪುಣ್ಯಕ್ಷೇತ್ರದಲ್ಲಿ “ಲೆಂಟನ್ ಗಾಸ್ಪೆಲ್ ಕಾಮಿಕ್ಸ್” ಪುಸ್ತಕ ಬಿಡುಗಡೆ

March 4, 2026

ರಾಜ್ಯದಲ್ಲಿ ಬಿಪಿಎಲ್ ಕಾರ್ಡ್‌ಧಾರಿಗಳಿಗೆ ಶಾಕಿಂಗ್ ಸುದ್ದಿ ; 20 ಲಕ್ಷ ಕಾರ್ಡ್ ರದ್ದು..!

March 4, 2026
1 2 3 … 1,823 Next
Automatic YouTube Gallery

ಅಂಬೇಡ್ಕರ್ ದೃಷ್ಟಿಕೋನದಲ್ಲಿ ಅಭಿವೃದ್ಧಿ ಭಾರತ ವಿಚಾರ ಸಂಕಿರಣ

ಅoಬೇಡ್ಕರ್ ದೃಷ್ಟಿಕೋನದಲ್ಲಿ ಅಭಿವೃದ್ಧಿ ಭಾರತ ವಿಚಾರ ಸಂಕಿರಣ; ಮoಗಳೂರು ಸೆನೆಟ್ ಸಭಾಂಗಣದಲ್ಲಿ ಕಾರ್ಯಕ್ರಮ

ಅಂಬೇಡ್ಕರ್ ಬಗ್ಗೆ ಅಕ್ಕ ಐ.ಎ.ಎಸ್ ಅಕಾಡೆಮಿಯ ಶಿವಕುಮಾರ್ ಪ್ರಾಸ್ತಾವಿಕ ಮಾತು


📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ...
ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates #mangalore #package #ambedkar
Show More
ಅಂಬೇಡ್ಕರ್ ದೃಷ್ಟಿಕೋನದಲ್ಲಿ ಅಭಿವೃದ್ಧಿ ಭಾರತ ವಿಚಾರ ಸಂಕಿರಣ
Now Playing
ಅಂಬೇಡ್ಕರ್ ದೃಷ್ಟಿಕೋನದಲ್ಲಿ ಅಭಿವೃದ್ಧಿ ಭಾರತ ವಿಚಾರ ಸಂಕಿರಣ
ಅoಬೇಡ್ಕರ್ ದೃಷ್ಟಿಕೋನದಲ್ಲಿ ಅಭಿವೃದ್ಧಿ ಭಾರತ ವಿಚಾರ ಸಂಕಿರಣ; ಮoಗಳೂರು ಸೆನೆಟ್ ...
ಅoಬೇಡ್ಕರ್ ದೃಷ್ಟಿಕೋನದಲ್ಲಿ ಅಭಿವೃದ್ಧಿ ಭಾರತ ವಿಚಾರ ಸಂಕಿರಣ; ಮoಗಳೂರು ಸೆನೆಟ್ ಸಭಾಂಗಣದಲ್ಲಿ ಕಾರ್ಯಕ್ರಮ

ಅಂಬೇಡ್ಕರ್ ಬಗ್ಗೆ ಅಕ್ಕ ಐ.ಎ.ಎಸ್ ಅಕಾಡೆಮಿಯ ಶಿವಕುಮಾರ್ ಪ್ರಾಸ್ತಾವಿಕ ಮಾತು


📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ...
ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates #mangalore #package #ambedkar
Show More
ನೂತನ ಕಟ್ಟಡದ ಉದ್ಘಾಟನಾ ಸಮಾರಂಭ
Now Playing
ನೂತನ ಕಟ್ಟಡದ ಉದ್ಘಾಟನಾ ಸಮಾರಂಭ
ಓಂ ಶ್ರೀ ಗಣೇಶ ಯುವಕ ಮಂಡಲ ಹಾಗೂ ಮಹಿಳಾ ಮಂಡಳಿ ಭಜನಾ ಮಂಡಳಿ,ಕುಣಿತ ಭಜನಾ ...
ಓಂ ಶ್ರೀ ಗಣೇಶ ಯುವಕ ಮಂಡಲ ಹಾಗೂ ಮಹಿಳಾ ಮಂಡಳಿ ಭಜನಾ ಮಂಡಳಿ,ಕುಣಿತ ಭಜನಾ ತಂಡ-ಪಾಣೇಲ ಶಾಂತಿನಗರ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ...
ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates #pajiru #ganeshaYuvakamandala #Inaugration #Santhoshkumarraiboliyar
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version
%d