UN NETWORKS
ಉಳ್ಳಾಲ : ಕಳೆದ ಕೆಲವು ದಿನಗಳಿಂದ ತೀವ್ರ ಕಡಲ್ಕೊರೆತದಿಂದ ತತ್ತರಿಸಿರುವ ಉಳ್ಳಾಲಕ್ಕೆ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಶುಕ್ರವಾರ ಬೆಳಗ್ಗೆ ಭೇಟಿ ನೀಡಿದರು.


ಕಡಲ್ಕೊರೆತ ತೀವ್ರಗೊಂಡಿರುವ ಕೈಕೋ, ಕಿಲೇರೀಯ, ಸೋಮೇಶ್ವರ, ಉಚ್ಚಿಲ ಪ್ರದೇಶಗಳಿಗೆ ತೆರಳಿದ ಸಚಿವರು ಪರಿಶೀಲನೆ ನಡೆಸಿದರು. ಸಂತ್ರಸ್ತರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸುವ ಭರವಸೆಯನ್ನು ಇದೇ ಸಂದರ್ಭ ಸಚಿವರು ನೀಡಿದರು. ಈ ಸಂದರ್ಭ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಅವರು ಜೊತೆಗಿದ್ದರು.
ಕಳೆದ 3-4 ದಿನಗಳಿಂದ ಉಳ್ಳಾಲ ಪ್ರದೇಶದಲ್ಲಿ ಕಡಲ್ಕೊರೆತ ತೀವ್ರ ಸ್ವರೂಪ ಪಡೆದಿದ್ದು, ಈಗಾಗಲೇ ಹಲವು ಮನೆಗಳು ಸಮುದ್ರಪಾಲಾಗಿವೆ. ಕೆಲವೆಡೆ ಮಸೀದಿ ಕೂಡಾ ಅಪಾಯದಂಚಿಗೆ ಸಿಲುಕಿವೆ.


