UN NETWORKS
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳದ ಮಂಗಳೂರು ಘಟಕದಲ್ಲಿ ಸುಮಾರು 20ವರ್ಷಗಳ ಕಾಲ ಪ್ಲ್ಲಟೂನ್ ಕಮಾಂಡರ್ ಆಗಿ ಸೇವೆ ಸಲ್ಲಿಸಿದ್ದ ಜೆ. ಕೇಶವ ಅವರು ಜೂ. 23ರಂದು ವಿಧಿವಶರಾಗಿದ್ದು ಅವರ ದಿವ್ಯಾತ್ಮಕ್ಕೆ ಚಿರಶಾಂತಿಯನ್ನು ಕೋರಲೆಂದು ಸೋಮವಾರ ಮೇರಿಹಿಲ್ ನಲ್ಲಿರುವ ಜಿಲ್ಲಾ ಗೃಹರಕ್ಷಕ ದಳ ಕಚೇರಿಯಲ್ಲಿ ಶ್ರದ್ಧಾಂಜಲಿ ಸಭೆ ನಡೆಸಲಾಯಿತು.

ಜಿಲ್ಲಾ ಸಮಾದೇಷ್ಠ ಡಾ. ಮುರಲೀ ಮೋಹನ್ ಚೂಂತರ್ ಮಾತನಾಡಿ ಕೇಶವ ಅವರು 1987ರಲ್ಲಿ ಕತೃವ್ಯಕ್ಕೆ ಸೇರಿ ಸುಮಾರು 20ವರ್ಷಗಳ ಕಾಲ ಸೇವೆ ಸಲ್ಲಿಸಿದ್ದು ಈ ಅವಧಿಯಲ್ಲಿ ಪ್ರವಾಹ ರಕ್ಷಣ ಕರ್ತವ್ಯ, ಕಾನೂನು ಸುವ್ಯವಸ್ಥ್ಥೆ ಕರ್ತವ್ಯ,ಚುನಾವಣಾ ಕರ್ತವ್ಯಗಳನ್ನ ಮಾಡಿ ಈ ಸೇವೆ ಬಗ್ಗೆ ಅನೇಕ ಪ್ರಶಸ್ತಿಗಳನ್ನು ಕೂಡ ಪಡೆದಿರುತ್ತಾರೆ. ಅವರ ಆತ್ಮಕ್ಕೆ ಶಾಂತಿ ಸಿಗಲೆಂದು, ಅವರ ಕುಟುಂಬಕ್ಕೆ ಈ ನೋವನ್ನು ಮರೆಯುವ ಶಕ್ತಿಯನ್ನು ಆ ದೇವರು ಕರುಣಿಸಲೆಂದು ನಾವೆಲ್ಲರೂ ಪ್ರಾರ್ಥಿಸೋಣ ಎಂದು ಮೃತರ ಆತ್ಮಕ್ಕೆ ಶಾಂತಿ ಸಿಗಲೆಂದು ನುಡಿದರು. ಬಳಿಕ ಒಂದು ನಿಮಿಷ ಮೌನಾಚರಿಸಲಾಯಿತು. ಉಪ ಸಮಾದೇಷ್ಟ ರಮೇಶ್, ಕಚೇರಿ ಸಿಬ್ಬಂದಿ ಹಾಗೂ ಗೃಹರಕ್ಷಕರು ಉಪಸ್ಥಿತರಿದ್ದರು.


