UN NETWORKS
ದೇರಳಕಟ್ಟೆ : ದೇರಳಕಟ್ಟೆಯ ಯೇನೆಪೊಯ ಹಸಿರು ಸಮುದಾಯ ಯೋಜನೆಯ ಅಂಗವಾಗಿ ಯೇನೆಪೊಯ ವಿಶ್ವವಿದ್ಯಾಲಯದ ಪರಿಸರ ಅಧ್ಯಯನ ಕೇಂದ್ರ ಹಾಗೂ ಬೆಳ್ಮ ಗ್ರಾಮ ಪಂಚಾಯಿತಿ ಜಂಟಿಯಾಗಿ ಬೆಳ್ಮ ಗ್ರಾಮ ಪಂಚಾಯಿತಿ ವಠಾರದಲ್ಲಿ ಬೇವು, ಮಹಾಗನಿ, ಮಂದಾರ ಮತ್ತು ಹೊಳೆ ದಾಸಾವಾಳದ ಗಿಡಗಳನ್ನು ನೆಡಲಾಯಿತು.

ಪರಿಸರ ಅಧ್ಯಯನ ಕೇಂದ್ರದ ಸಹಾಯಕ ನಿರ್ದೇಶಕಿ ಡಾ. ಭಾಗ್ಯ ಬಿ. ಶರ್ಮ ಮತ್ತು ಅಧ್ಯಾಪಕರು ಮತ್ತು ಪಂಚಾಯತ್ ಅಭಿವೃದ್ಧಿ ಅಧಿಕಾರಿ ನವೀನ್ ಹೆಗ್ಡೆ, ಪಂಚಾಯಿತಿ ಅಧ್ಯಕ್ಷೆ ವಿಜಯ ಕೃಷ್ಣಪ್ಪ, ಉಪಾಧ್ಯಕ್ಷ ಅಬ್ದುಲ್ ಸತ್ತಾರ್, ಕಾರ್ಯದರ್ಶಿ ವಾಣಿ ಮತ್ತು ಪಂಚಾಯಿತಿ ಸಿಬ್ಬಂದಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಬೆಳ್ಮ ಗ್ರಾಮ ಪಂಚಾಯಿತಿಯ ಮಹಮ್ಮದ್ ಕಮಲ್ ಕಾರ್ಯಕ್ರಮ ಸಂಯೋಜಿಸಿದರು.


