UN NETWORKS
ಉಳ್ಳಾಲ : ಬಯೋ ಪ್ಲಾಸ್ಟಿಕ್ ಬಳಕೆ ಹೆಚ್ಚಿಸಿ ಪ್ಲಾಸ್ಟಿಕ್ ನಿರ್ಮೂಲನೆ ಮಾಡಬೇಕು. ಹಾಗೆಯೇ ಗಿಡಗಳ ಮಹತ್ವದ ಕುರಿತು ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವ ಕಾರ್ಯಗಳು ನಡೆಯಬೇಕು ಎಂದು ಉಳ್ಳಾಲದ ಭಾರತ್ ಅನುದಾನಿತ ಪ್ರೌಢಶಾಲಾ ಶಿಕ್ಷಕಿ ಪ್ರಜ್ಞಾ ಉಳ್ಳಾಲ್ ಹೇಳಿದರು.
ಉಳ್ಳಾಲದ ಕೆ. ಪಾಂಡ್ಯರಾಜ ಬಲ್ಲಾಳ್ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಪರಿಸರ ದಿನ ಮತ್ತು ವನ ಮಹೋತ್ಸವ ಜಂಟಿ ಕಾರ್ಯಕ್ರಮದಲ್ಲಿ ಅವರು ಅತಿಥಿಯಾಗಿ ಮಾತನಾಡಿದರು. ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ಶರ್ಮಿಳಾ ಮುಖೇಶ್ ರಾವ್ ಮಾತನಾಡಿ ಮಿತಿಮೀರಿದ ಪರಿಸರ ನಾಶ ಮತ್ತು ಪ್ರಸ್ತುತ ನಾವು ಅನುಭವಿಸುತ್ತಿರುವ ಸ್ಥಿತಿಗತಿಗಳ ಬಗ್ಗೆ ತಿಳಿದುಕೊಂಡು ವಿದ್ಯಾರ್ಥಿಗಳು ಜವಾಬ್ದಾರಿಯುತವಾಗಿ ಮುನ್ನಡೆಯಬೇಕು ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಪರಿಸರದ ಕಾಳಜಿಯ ಬಗ್ಗೆ ವಿದ್ಯಾರ್ಥಿಗಳು ನಾಟಕ ಪ್ರದರ್ಶನ ಮಾಡಿದರು. ಪದವಿಪೂರ್ವ ಮತ್ತು ನರ್ಸಿಂಗ್ ಕಾಲೇಜಿನ ಉಪನ್ಯಾಸಕರು ಉಪಸ್ಥಿತರಿದ್ದರು. ಬಳಿಕ ಕಾಲೇಜು ಆವರಣದಲ್ಲಿ ಗಿಡಗಳನ್ನು ನೆಡಲಾಯಿತು.
ನೈ ಝಾ ಸ್ವಾಗತಿಸಿದರು. ಷಹಲ ಕಾರ್ಯಕ್ರಮ ನಿರೂಪಿಸಿದರು. ನಸೀಫ್ ವಂದಿಸಿದರು.ಉಪನ್ಯಾಸಕಿ ನಿಶ್ಮ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು. ಕಾರ್ಯಕ್ರಮದ ಬಳಿಕ ಪ್ರಜ್ಞಾ ಇವರಿಂದ ವಿದ್ಯಾರ್ಥಿಗಳಿಗೆ ಬೀಟ್ ಪ್ಲಾಸ್ಟಿಕ್ ಬೀಟ್ ಪೊಲ್ಯೂಷನ್ ಎಂಬ ವಿಷಯದ ಕುರಿತು ಉಪನ್ಯಾಸ ಜರುಗಿತು.