UN NETWORKS
ಕೊಣಾಜೆ : ಸ್ವಚ್ಛತೆ, ಪ್ರಕೃತಿ ರಕ್ಷಣೆಗಾಗಿ ರಾಜ್ಯ, ಕೇಂದ್ರ ಸರ್ಕಾರ ಸಾಕಷ್ಟು ಅನುದಾನ ನೀಡುತ್ತಿದೆ. ಅನುದಾನ ಸಮರ್ಪಕವಾಗಿ ಬಳಕೆಯಾಗಬೇಕಾದರೆ ಸಂಘ, ಸಂಸ್ಥೆಗಳ ಸಹಕಾರ ಅಗತ್ಯ. ಈ ಬಗ್ಗೆ ಭಾಷಣ ಮಾಡಿದರೆ ಸಾಲದು, ನಿರಂತರ ಅಳವಡಿಸಿಕೊಳ್ಳಬೇಕು ಎಂದು ಮೂಡಾದ ಮಾಜಿ ಅಧ್ಯಕ್ಷ ಇಬ್ರಾಹಿಂ ಕೋಡಿಜಾಲ್ ಹೇಳಿದರು.

ಮಂಗಳಾ ಗ್ರಾಮೀಣ ಯುವಕ ಸಂಘ, ಕೊಣಾಜೆ ಗ್ರಾಮ ಪಂಚಾಯಿತಿ ಹಾಗೂ ಯೂತ್ ಫ್ರೆಂಡ್ಸ್ ಕ್ಲಬ್ ಇವುಗಳ ಸಂಯುಕ್ತ ಆಶ್ರಯದಲ್ಲಿ ಭಾಕೊಣಾಜೆ ಗ್ರಾಮ ಪಂಚಾಯಿತಿ ಅಧ್ಯಕ್ಷ ನಝರ್ ಷಾ ಪಟ್ಟೋರಿ ಅಧ್ಯಕ್ಷತೆ ವಹಿಸಿದ್ದರು. ಹರೇಕಳ ರಾಮಕೃಷ್ಣ ಪ್ರೌಢಶಾಲೆಯ ಮುಖ್ಯ ಶಿಕ್ಷಕ ರವೀಂದ್ರ ರೈ ಕಲ್ಲಿಮಾರ್, ಗ್ರಾಮ ಪಂಚಾಯಿತಿ ಸದಸ್ಯೆ ಮುತ್ತು ಶೆಟ್ಟಿ, ಅಭಿವೃದ್ಧಿ ಅಧಿಕಾರಿ ಸವಿತಾ, ಮಂಗಳಾ ಗ್ರಾಮೀಣ ಯುವಕ ಸಂಘದ ಸ್ಥಾಪಕಾಧ್ಯಕ್ಷ ಅಬ್ದುಲ್ ರಹ್ಮಾನ್ ಕೋಡಿಜಾಲ್, ಇಕ್ಬಾಲ್ ಕೊಣಾಜೆ ಇನ್ನಿತರರು ಉಪಸ್ಥಿತರಿದ್ದರು.
ಮಂಗಳಾ ಗ್ರಾಮೀಣ ಯುವಕ ಸಂಘದ ಅಧ್ಯಕ್ಷ ಅಬ್ದುಲ್ ರಹ್ಮಾನ್ ಎ.ಕೆ. ವಂದಿಸಿದರು. ಗ್ರಾಮ ಪಂಚಾಯಿತಿ ಸದಸ್ಯ ಅಚ್ಚುತ ಗಟ್ಟಿ ಕಾರ್ಯಕ್ರಮ ನಿರೂಪಿಸಿದರು.


