ಉಳ್ಳಾಲ್ ನ್ಯೂಸ್ ಡೆಸ್ಕ್
ಕೊಣಾಜೆ: ಇಲ್ಲಿನ ಮಂಗಳಗಂಗೋತ್ರಿಯ ಮಂಗಳೂರು ವಿಶ್ವವಿದ್ಯಾನಿಲಯದ ಮಾನವ ಪ್ರಜ್ಞೆ ಮತ್ತು ಯೋಗ ವಿಜ್ಞಾನ ವಿಭಾಗದ ಆಶ್ರಯದಲ್ಲಿ ವಿಶ್ವ ಯೋಗ ದಿನಾಚರಣೆಯನ್ನು ಮಂಗಳೂರು ವಿವಿಯ ಮಂಗಳ ಸಭಾಂಗಣದಲ್ಲಿ ಆಚರಿಸಲಾಯಿತು.
ಈ ಸಂದರ್ಭ ಮಂಗಳೂರು ವಿವಿಯ ಉಪ ಕುಲಪತಿ ಪ್ರೊ. ಕೆ.ಭೈರಪ್ಪ , ಪ್ರಜಾಪಿತ ಈಶ್ವರೀಯ ವಿಶ್ವ ವಿದ್ಯಾಲಯದ ಅಧ್ಯಾಪಕಿ ವಿಶ್ವೇಶ್ವೆರಿ ಕುಮಾರಿ, ವಿವಿ ಕುಲಸಚಿವ ಪ್ರೊ.ಪಿ.ಎಸ್.ಎಡಪಡಿತ್ತಾಯ, ಡಾ. ತಿರುಮಲೇಶ್ವರ ಪ್ರಸಾದ್ ಎಚ್., ವಿವಿಯ ಮಾನವ ಪ್ರಜ್ಞೆ ಮತ್ತು ಯೋಗ ವಿಜ್ಞಾನದ ಅಧ್ಯಕ್ಷ ಡಾ.ಕೆ.ಕೃಷ್ಣ ಶರ್ಮ ಮೊದಲಾದವರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಉಪಕುಲಪತಿಗಳು ಸೇರಿದಂತೆ ಸಾರ್ವಜನಿಕರಿಂದ ಯೋಗಾಭ್ಯಾಸ ಪ್ರದರ್ಶನ ನಡೆಯಿತು.

















