UN NETWORKS
ತಲಪಾಡಿ : ವಿದ್ಯಾರ್ಥಿ ಜೀವನದಲ್ಲಿ ಶಿಸ್ತು, ಪ್ರಾಮಾಣಿಕತೆ ಮತ್ತು ನಾಯಕತ್ವದ ಗುಣಗಳನ್ನು ಅಳವಡಿಸಿಕೊಂಡಾಗ ಮುಂದಿನ ದಿನಗಳಲ್ಲಿ ಉತ್ತಮ ನಾಯಕರಾಗುವುದರಲ್ಲಿ ಸಂಶಯವಿಲ್ಲ ಎಂದು ರೇಡಿಯಾಲಜಿ ವಿಭಾಗದ ಮುಖ್ಯಸ್ಥ ಡಾ| ಕೃಷ್ಣ ಯು. ಅಭಿಪ್ರಾಯಪಟ್ಟರು.

ತಲಪಾಡಿಯ ಶಾರದಾ ವಿದ್ಯಾನಿಕೇತನ ಪಬ್ಲಿಕ್ ಶಾಲೆಯಲ್ಲಿ ವಿದ್ಯಾರ್ಥಿ ಸಂಘವನ್ನು ಉದ್ಘಾಟಿಸಿ ಮಾತನಾಡಿದರು. ಶಾರದಾ ಸಮೂಹ ಸಂಸ್ಥೆಗಳ ಅಧ್ಯಕ್ಷ ಪ್ರೊ| ಎಂ. ಬಿ. ಪುರಾಣಿಕ್ ಮಾತನಾಡಿ ಪ್ರತಿಯೊಬ್ಬ ವಿದ್ಯಾರ್ಥಿಯಲ್ಲೂ ವಿವಿಧ ರೀತಿಯ ಪ್ರತಿಭೆಗಳಿದ್ದು ಅವುಗಳನ್ನು ಹೊರತರಲು ಹಾಗೂ ನಾಯಕತ್ವ ಗುಣ ಬೆಳೆಸಿಕೊಳ್ಳಲು ವಿದ್ಯಾರ್ಥಿ ಸಂಘವು ಪ್ರಮುಖ ಪಾತ್ರ ವಹಿಸುತ್ತದೆ ಎಂದರು.ಶಾಲಾ ಪ್ರಾಂಶುಪಾಲ ಸುಷ್ಮಾ ದಿನಕರ್, ಮೋಹನ್‍ದಾಸ್, ಲತಾಂಜಲಿ ರೈ, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ವಿನಾಯಕ್ ಬಿ.ಜಿ, ಆಡಳಿತಾ„ಕಾರಿ ವಿವೇಕ್ ತಂತ್ರಿ, ಶಿಕ್ಷಕ ಶಿಕ್ಷಕೇತರ ವರ್ಗದವರು ಉಪಸ್ಥಿತರಿದ್ದರು.


