UN NETWORKS
ತಲಪಾಡಿ : ಪದವಿ ಪೂರ್ವ ಕಾಲೇಜು ಶಿಕ್ಷಣ ಇಲಾಖೆ 2018-19ರ ಶೈಕ್ಷಣಿಕ ಸಾಲಿನಲ್ಲಿ ನಡೆಸಿದ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಸತತ ಎರಡನೇ ಬಾರಿಗೆ ಶೇಕಡ 100% ಫಲಿತಾಂಶ ಸಾಧಿಸಿದ ತಲಪಾಡಿ ಕೆ.ಸಿ ರೋಡ್ ವಿದ್ಯಾನಗರದ ಫಲಾಹ್ ಬಾಲಕಿಯರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರಿಗೆ ಹಾಗೂ ಪ್ರಾಂಶುಪಾಲರಿಗೆ ಮತ್ತು ಉಪನ್ಯಾಸಕರಿಗೆ ಆಡಳಿತ ಮಂಡಳಿ ಫಲಾಹ್ ಎಜುಕೇಶನ್ ಸೊಸೈಟಿ ವತಿಯಿಂದ ಅಭಿನಂದನಾ ಸಮಾರಂಭ ನಡೆಯಿತು.

ಫಲಾಹ್ ಎಜುಕೇಶನ್ ಸೊಸೈಟಿ ಅಧ್ಯಕ್ಷ ಎನ್.ಅರಬಿ ಕುಂಞ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು. ಸಂಸ್ಥೆಯ ಪ್ರಾಂಶುಪಾಲ ಅಬ್ದುಲ್ ಖಾದರ್ ಹುಸೈನ್ ಪಡುಬಿದ್ರಿ ಪ್ರಾಸ್ತವಿಕವಾಗಿ ಮಾತನಾಡಿದರು. ಸಂಸ್ಥೆಯ ಸಂಚಾಲಕ ಹಾಗೂ ಕರ್ನಾಟಕ ಹೈಕೋರ್ಟ್‍ನ ನ್ಯಾಯಾವಾದಿ ಮುಝಫರ್ ಅಹಮದ್, ಕಾರ್ಯದರ್ಶಿ ಅಬ್ಬಾಸ್ ಉಚ್ಚಿಲ್ ಮತ್ತು ಮಾಜಿ ಕೋಶಾ„ಕಾರಿ ಇಸ್ಮಾಯಿಲ್ ನಾಗತೋಟ ಸಂದರ್ಭೋಚಿತವಾಗಿ ಮಾತನಾಡಿದರು. ಈ ಸಂದರ್ಭದಲ್ಲಿ ಪ್ರಸ್ತುತ ಶೈಕ್ಷಣಿಕ ವರ್ಷದ 100 ಗಂಟೆಗಳ ಸ್ಪೋಕನ್ ಇಂಗ್ಲೀಷ್ ಕೋರ್ಸ್, ಕಾಲೇಜು ಚಟುವಟಿಕೆಗಳ ವಿವಿಧ ಸಂಘದ ಉದ್ಘಾಟನೆ ಹಾಗೂ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷೆಯಾದ ಫಮೀಝರವರ ಪದಗ್ರಹಣ ಕಾರ್ಯಕ್ರಮ ನೆರವೇರಿಸಲಾಯಿತು.
ಉಪಾಧ್ಯಕ್ಷ ಟಿ.ಎಂ ಅಬ್ಬಾಸ್, ಮಾಜಿ ಅಧ್ಯಕ್ಷ ಯು.ಬಿ ಮೊಹಮ್ಮದ್ , ಕೋಶಾಧಿಕಾರಿ ಅಬ್ಬಾಸ್ ಮಜಲ್, ಫಲಾಹ್ ಕನ್ನಡ ಮಾಧ್ಯಮ ಪ್ರೌಢಶಾಲೆಯ ಮುಖ್ಯಶಿಕ್ಷಕ ಮೊಹಮ್ಮದ್ ರಫೀಕ್, ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಆಯಿಷಾ ಸಬೀನಾ ಕೈಸಿರಾನ್ , ಪ್ರಾರ್ಥಮಿಕ ವಿಭಾಗದ ಮುಖ್ಯಶಿಕ್ಷಕಿ ವಿದ್ಯಾ ವಿ ಡಿ’ಸೋಜ, ಕಾಲೇಜು ನಾಯಕಿ ಝುನೈರ, ಉಪನಾಯಕಿ ಯು.ಐ. ಅಂಬ್ರೀಝ ಉಪಸ್ಥಿತರಿದ್ದರು. ಉಪನ್ಯಾಸಕಿ ರೇವತಿ.ಎನ್.ರೈ ಸ್ವಾಗತಿಸಿದರು. ಉಪನ್ಯಾಸಕಿ ಜೀವಿತಾ ಶೆಟ್ಟಿ ಸ್ವಾಗತಿಸಿದರು. ಉಪನ್ಯಾಸಕ ಮನೋಜ್ ಎಂ.ಬಿ. ವಂದಿಸಿದರು.


