UN NETWORKS
ಕೈರಂಗಳ : ಕೈರಂಗಳದ ಶಾರದಾ ಗಣಪತಿ ವಿದ್ಯಾಕೇಂದ್ರದಲ್ಲಿ ಪಠ್ಯೇತರ ಚಟುವಟಿಕೆಗಳ ಹಾಗೂ ಶಾಲಾ ಸಂಸತ್ತಿನ ಉದ್ಘಾಟನೆ ನಡೆಯಿತು. ಮಂಗಳೂರು ವಿಧಾನಸಭಾ ಕ್ಷೇತ್ರದ ಬಿ.ಜೆ.ಪಿ ಅಧ್ಯಕ್ಷ ಸಂತೋಷ್ ಕುಮಾರ್ ರೈ ಬೋಳಿಯಾರು ಅಧ್ಯಕ್ಷತೆ ವಹಿಸಿ ಮಾತನಾಡಿ ಭವಿಷ್ಯದ ನಾಯಕರಾಗಬಲ್ಲ ಮಕ್ಕಳು ಎಳವೆಯಲ್ಲಿಯೇ ಉತ್ತಮ ಗುಣಗಳನ್ನು ಮೈಗೂಡಿಸಿಕೊಳ್ಳಬೇಕು ಎಂದರು.

ಮಂಗಳೂರು ವಿಧಾನಸಭಾ ಕ್ಷೇತ್ರದ ಮಹಿಳಾ ಮೋರ್ಚ ಉಪಾಧ್ಯಕ್ಷೆ ಪೂರ್ಣಿಮಾ ಪುರಂದರ ಶೆಟ್ಟಿ ಮಕ್ಕಳು ಯಾವುದೇ ಕೆಟ್ಟ ಚಟಗಳಿಗೆ ಬಲಿಯಾಗದೇ ಸಾತ್ವಿಕ ಜೀವನ ನಡೆಸಬೇಕು ಎಂದರು. ಈ ವರ್ಷ ದಾಖಲಾದ ವಿದ್ಯಾರ್ಥಿಗಳನ್ನು ತಿಲಕವಿಟ್ಟು ಸ್ವಾಗತಿಸಲಾಯಿತು. ಶಾಲಾ ಪ್ರಿನ್ಸಿಪಾಲ್ ದಿವ್ಯದೀಪ ಶಾಲಾ ಸಂಸತ್ತಿನ ಸದಸ್ಯರಿಗೆ ಪ್ರಮಾಣವಚನ ಬೋಸಿದರು. ಮಾಧವ ಕೊಳತ್ತಮಜಲು ಮತ್ತು ಯಕ್ಷಧ್ರುವ ಪಟ್ಲ ಫೌಂಡೇಶನ್‍ನ ಪ್ರತಿನಿ ರಾಜೇಶ್ ಮಡಿವಾಳ ಉಪಸ್ಥಿತರಿದ್ದರು.
ಶ್ರೀನಿವಾಸ ಭಟ್ ಸೇರಾಜೆ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಅಶ್ವತಿದುರ್ಗಾ ಸ್ವಾಗತಿಸಿದರು. ಶರಣ್ ಶೆಟ್ಟಿ ವಂದಿಸಿದರು. ಸ್ವಸ್ತಿ ಕಾರ್ಯಕ್ರಮ ನಿರೂಪಿಸಿದರು.


