Site icon Ullalavani

ಅವಕಾಶಗಳ ಸದ್ಬಳಕೆ ವ್ಯಕ್ತಿತ್ವ ನಿರ್ಮಾಣಕ್ಕೆ ಪೂರಕ : ಡಾ.ರವಿಶಂಕರ್

UN NETWORKS

ಹರೇಕಳ : ಪಾವೂರು-ಹರೇಕಳದ ಶ್ರೀ ರಾಮಕೃಷ್ಣ ಅನುದಾನಿತ ಪ್ರೌಢಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನಾ ಸಮಾರಂಭ ಇತ್ತೀಚೆಗೆ ನಡೆಯಿತು. ಮಂಗಳೂರು ವಿಶ್ವವಿದ್ಯಾಲಯ ಇಂಗ್ಲೀಷ್ ವಿಭಾಗದ ಪ್ರಾಧ್ಯಾಪಕ ಡಾ. ರವಿಶಂಕರ್ ರಾವ್ ವಿವಿಧ ಸಂಘಗಳನ್ನು ಉದ್ಘಾಟಿಸಿ ಮಾತನಾಡಿ ವಿದ್ಯಾರ್ಥಿಗಳು ತಮ್ಮಲ್ಲಿರುವ ಕೀಳರಿಮೆಯನ್ನು ಬಿಟ್ಟು ದೈರ್ಯದಿಂದ ತಮಗೆ ಒದಗಿ ಬರುವ ಅವಕಾಶಗಳನ್ನು ಉಪಯೋಗಿಸಿಕೊಂಡಾಗ ಸರಿಯಾದ ವ್ಯಕ್ತಿತ್ವ ನಿರ್ಮಿಸಿಕೊಳ್ಳಲು ಸಾಧ್ಯ ಎಂದರು.

ಶಾಲಾ ಸಂಚಾಲಕ ಜಯರಾಮ ಆಳ್ವ ಪೋಡಾರ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಗುರುತಿಸಿ ಗೌರವಿಸಲಾಯಿತು. ಶಾಲಾ ಮುಖ್ಯ ಶಿಕ್ಷಕ ಕೆ. ರವೀಂದ್ರ ರೈ ಪ್ರಾಸ್ತಾವಿಕ ನುಡಿಗಳನ್ನಾಡಿದರು. ವಿವಿಧ ಸಂಘಗಳ ಅಧ್ಯಕ್ಷ ಪದಾಧಿಕಾರಿಗಳಿಗೆ ಮುಖ್ಯ ಶಿಕ್ಷಕರು ಪ್ರತಿಜ್ಞಾ ವಿಧಿ ಬೋಧಿಸಿದರು. ಶಿಕ್ಷಕ ರಕ್ಷದ ಸಂಘದ ಅಧ್ಯಕ್ಷೆ ಜಯಶ್ರೀ ಹಾಗೂ ಅಧ್ಯಾಪಕರು ಉಪಸ್ಥಿತರಿದ್ದರು.
ರಿತಿಕಾ, ದೀಕ್ಷಾ, ವೇದಾಕ್ಷಿ, ನಬಿಲ್, ಕೌಶಿಕ್, ಯಂಸೀನ, ಫಾತಿಮ ಶಿಫಾ ಹಾಗೂ ನವನೀತ್ ಪ್ರಮಾಣ ವಚನಗೈದರು.

ಕಾರ್ಯಕ್ರಮದಲ್ಲಿ ಎಸ್‍ಎಸ್‍ಎಲ್‍ಸಿಯಲ್ಲಿ ಅತ್ಯಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳಾದ ಸುಶ್ಮಿತಾ ಮತ್ತು ಶರಣ್ಯ ಅವರನ್ನು ಅಭಿನಂದಿಸಲಾಯಿತು. ಶಿಕ್ಷಕ ರವಿಶಂಕರ್ ಸ್ವಾಗತಿಸಿದರು. ಶಿಕ್ಷಕಿ ಉಷಾಲತ ವಂದಿಸಿದರು. ದೈಹಿಕ ಶಿಕ್ಷಕ ತ್ಯಾಗಂ ಹರೇಕಳ ಕಾರ್ಯಕ್ರಮ ನಿರೂಪಿಸಿದರು.

Exit mobile version