UN NETWORKS
ಕೊಣಾಜೆ : ತ್ಯಾಜ್ಯ ವಿಲೇವಾರಿಯ ಬಗ್ಗೆ ಮಾಹಿತಿ ಕೇಳಲು ತೆರಳಿದ್ದ ಕೊಣಾಜೆ ಗ್ರಾಮ ಪಂಚಾಯತ್ ಅಭಿವೃದ್ದಿ ಅಧಿಕಾರಿ ಹಾಗೂ ಪಂಚಾಯತ್ ಸದಸ್ಯನ ಮೇಲೆ ಹಲ್ಲೆಗೆ ಸಂಬಂಧಿಸಿದಂತೆ ಫಾಸ್ಟ್‍ಫುಡ್ ಅಂಗಡಿ ನಡೆಸುತ್ತಿದ್ದ ಗೀತಾ ವಿರುದ್ಧವೂ ಪ್ರಕರಣ ದಾಖಲಾಗಿದ್ದು ಕೊಣಾಜೆ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಅಸೈಗೋಳಿಯಲ್ಲಿದ್ದ ಪಾಸ್ಟ್ ಫುಡ್ ಅಂಗಡಿಯ ತ್ಯಾಜ್ಯ ವಿಷಯಕ್ಕೆ ಸಂಬಂಧಿಸಿದಂತೆ ತಪಾಸಣೆ ನಡೆಸಲು ಬಂದಿದ್ದ ಕೊಣಾಜೆ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸವಿತಾ ಅವರಿಗೆ ಕರ್ತವ್ಯಕ್ಕೆ ಅಡ್ಡಿ ಹಾಗೂ ಸ್ಥಳೀಯ ಗ್ರಾಮ ಪಂಚಾಯತ್ ಸದಸ್ಯ ರವಿ ಅಸೈಗೋಳಿ ಅವರಿಗೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಯತೀಶ್ ಮತ್ತು ಸುರೇಂದ್ರ ಅವರ ಮೇಲೆ ಪ್ರಕರಣ ದಾಖಲಾಗಿತ್ತು. ಘಟನೆಗೆ ಸಂಬಂಧಿಸಿದಂತೆ ಅಂಗಡಿ ಮಾಲಿಕರ ವಿರುದ್ಧವೂ ಪ್ರಕರಣ ದಾಖಲಾಗಿದೆ.
ಅನಧಿಕೃತ ಅಂಗಡಿ ತೆರವಿಗೆ ನಿರ್ಣಯ : ಫಾಸ್ಟ್ ಫುಡ್ ಅನಧಿಕೃತವಾಗಿದ್ದು ಅಂಗಡಿ ಮುಚ್ಚಿಸಲು ಪಂಚಾಯತ್‍ನಲ್ಲಿ ಬುಧವಾರ ನಡೆದ ತುರ್ತು ಸಭೆಯಲ್ಲಿ ನಿರ್ಣಯ ತೆಗೆದುಕೊಳ್ಳಲಾಗಿದೆ.
ಗೂಂಡಾ ಕಾಯ್ದೆ ದಾಖಲಿಸಲು ಮನವಿ : ಕೊಣಾಜೆ ಪಂಚಾಯತ್ ಅಭಿವೃದ್ದಿ ಅಧಿಕಾರಿಯವರಿಗೆ ಹಲ್ಲೆ ಮಾಡಿದ ವಿಚಾರದಲ್ಲಿ ಆರೋಪಿಗಳ ವಿರುದ್ಧ ಗೂಂಡಾ ಕಾಯ್ದೆ ಯಡಿ ದಾವೆ ದಾಖಲಿಸುವಂತೆ ಗ್ರಾಮ ಪಂಚಾಯತ್‍ಗಳ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳು ಮತ್ತು ದ್ವಿತೀಯ ದರ್ಜೆ ಸಹಾಯಕರ ಲೆಕ್ಕ ಸಹಾಯಕರ ಸಂಘ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಗಳಿಗೆ ಮನವಿ ಮಾಡಿದ್ದು ಆರೋಪಿಗಳಿಗೆ ಕಠಿಣ ಶಿಕ್ಷೆ ಆಗುವಂತೆ ಪೊಲೀಸ್ ಇಲಾಖೆಯ ಮೇಲೆ ಒತ್ತಡ ಹೇರಬೇಕೆಂದು ಆಗ್ರಹಿಸಿದೆ.


