Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
ಗ್ರಾಮ

ಸೋಮೇಶ್ವರ ಗ್ರಾಮ ಪಂಚಾಯತ್‌ ಪುರಸಭೆಯಾಗಿ ಮೇಲ್ದರ್ಜೆಗೆ

UllalaVaniBy UllalaVaniJuly 22, 2019No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

UN NETWORKS

ಸೋಮೇಶ್ವರ : ರಾಜ್ಯದ ಅತೀದೊಡ್ಡ ಪಂಚಾಯತ್‌ ಆಗಿರುವ ಮಂಗಳೂರು ತಾಲೂಕಿನ ಸೋಮೇಶ್ವರ ಗ್ರಾಮ ಪಂಚಾಯತ್‌ ಪುರಸಭೆಯಾಗಿ ಮೇಲ್ದರ್ಜೆಗೇರಿದೆ. ರಾಜ್ಯ ಸರಕಾರ ಪಂಚಾಯತ್‌ ಮೇಲ್ದರ್ಜೇಗೇರಿಸುವ ನಿಟ್ಟಿ ನಲ್ಲಿ ಕರಡು ಅಧಿಸೂಚನೆ ಹೊರಡಿಸಿದ ಒಂದು ವರ್ಷದ ಬಳಿಕ ಪುರಸಭೆಯಾಗಿ ಅಧಿಕೃತವಾಗಿ ಘೋಷಣೆ ಮಾಡಿದ್ದು ಮುಖ್ಯಾಧಿಕಾರಿಯನ್ನು ನೇಮಕ ಮಾಡಿ ಆದೇಶ ನೀಡಿದೆ.

12 ವರ್ಷಗಳಿಂದ ಸೋಮೇಶ್ವರ ಪಂ. ಮೇಲ್ದರ್ಜೆಗೇರಿಸಬೇಕು ಎಂದು ಹೋರಾಟ, ಚುನಾವಣೆ ಬಹಿ ಷ್ಕಾರ ಸಹಿತ ಹಲವು ರೀತಿಯಲ್ಲಿ ಜನಪ್ರತಿನಿ ಧಿಗಳು, ಮುಖಂಡರು ಮತ್ತು ಗ್ರಾಮಸ್ಥರು ರಾಜ್ಯ ಸರಕಾರಕ್ಕೆ ಒತ್ತಾಯಿಸಿ ಮೇಲ್ದರ್ಜೆ ಗೇರಿಸುವಂತೆ ಮನವಿ ಮಾಡಿದ್ದರು. ಜನಸಂಖ್ಯೆಯ ಆಧಾರದಲ್ಲಿ ಕಡಿಮೆಯಿದ್ದ ಕೋಟೆಕಾರು ಪಟ್ಟಣ ಪಂಚಾಯತ್‌ ಆಗಿ ಮೇಲ್ದರ್ಜೆಗೇರಿದ ಬಳಿಕ ಸೋಮೇ ಶ್ವರವನ್ನು ಮೇಲ್ದರ್ಜೆಗೇರಿಸುವ ಭರವಸೆ ನೀಡಿದ್ದ ಸಚಿವ ಯು.ಟಿ. ಖಾದರ್‌ ಪುರ ಸಭೆ ಮಾಡುವ ನಿಟ್ಟಿನಲ್ಲಿ ಪ್ರಕ್ರಿಯೆಗೆ ಚಾಲನೆ ನೀಡಿದ್ದರು. ಸೋಮೇಶ್ವರ ಪುರಸಭೆಯಾಗುವ ಹಿನ್ನೆಲೆಯಲ್ಲಿ 2018ರ ಜು. 23ರಂದು ಕರ್ನಾಟಕ ವಿಶೇಷ ರಾಜ್ಯ ಪತ್ರದಲ್ಲಿ ಕರಡು ಅಧಿಸೂಚನೆಯನ್ನು ಹೊರಡಿಸಿದ್ದು, ಸಲಹೆಗಳು ಆಕ್ಷೇಪಗಳು ಇದ್ದಲ್ಲಿ ಒಂದು ತಿಂಗಳೊಳಗೆ ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಲಾಗಿತ್ತು. ಪಂಚಾ ಯತ್‌ ಅಧಿಸೂಚನೆಯ ಪತ್ರವನ್ನು ನೋಟಿಸ್‌ ಬೋರ್ಡ್‌ನಲ್ಲಿ ಅಳವಡಿಸಿದ್ದು ಯಾವುದೇ ಆಕ್ಷೇಪಗಳು ಬಂದಿರಲಿಲ್ಲ. ಈಗ ವರ್ಷದ ಬಳಿಕ ಅಧಿಕೃತವಾಗಿ ಪುರಸಭೆಯಾಗಿ ಮಾನ್ಯತೆಯನ್ನು ನೀಡಿದ್ದು ಮುಖ್ಯಾಧಿಕಾರಿಯನ್ನು ನೇಮಕ ಮಾಡಿದೆ.

ಸೋಮೇಶ್ವರ ಗ್ರಾ.ಪಂ. 2,063 ಎಕ್ರೆ ವಿಸ್ತೀರ್ಣ ಹೊಂದಿರುವ ಸೋಮೇಶ್ವರ ಗ್ರಾ. ಪಂ.ನಲ್ಲಿ 61 ಸದಸ್ಯರಿದ್ದು, 2011ರ ಜನಗಣತಿಯ ಪ್ರಕಾರ 24,660 ಜನಸಂಖ್ಯೆ ಹೊಂದಿದ್ದು ಪ್ರಸ್ತುತ 30 ಸಾವಿರ ಜನಸಂಖ್ಯೆಯನ್ನು ಹೊಂದಿದೆ. 5,681 ಮನೆ ಮತ್ತು ವಾಣಿಜ್ಯ ಸಂಕೀರ್ಣಗಳು ಈ ಗ್ರಾಮದಲ್ಲಿದ್ದು ಅನುದಾನದ ಕೊರತೆಯಿಂದ ಗ್ರಾಮದ ಅಭಿವೃದ್ಧಿಗೆ ಸಮಸ್ಯೆಯಾಗಿತ್ತು.

12 ವರ್ಷಗಳ ಹೋರಾಟ
ರಾಜ್ಯದ ಎರಡನೇ ಅತೀ ದೊಡ್ಡ ಪಂಚಾಯತ್‌ ಆಗಿದ್ದ ಸೋಮೇಶ್ವರ ಗ್ರಾ.ಪಂ. ಪ. ಪಂ. ಆಗಿ ಮೇಲ್ದರ್ಜೆಗೇರಿಸಬೇಕೆಂದು ಪಕ್ಷಾತೀತವಾಗಿ ಸುಮಾರು 12 ವರ್ಷಗಳ ಹಿಂದೆಯೇ ಹೋರಾಟ ಆರಂಭವಾಗಿತ್ತು. ಹಲವು ವರ್ಷಗಳಿಂದ ಬಿಜೆಪಿ ಆಡಳಿತದಲ್ಲಿದ್ದ ಈ ಗ್ರಾ.ಪಂ. ನ ಹೋರಾಟಕ್ಕೆ ಕಾಂಗ್ರೆಸ್‌ ಸಹಿತ ವಿವಿಧ ಪಕ್ಷಗಳು ಸಾಥ್‌ ನೀಡಿದ್ದವು. ಪಂ.ನ ಅಭಿವೃದ್ಧಿಗೆ ಬಿಡುಗಡೆಯಾಗುವ ಅನುದಾನ ಸಾಕಾಗುವುದಿಲ್ಲ, ವಿದ್ಯುತ್‌ ಬಿಲ್ ಕೋಟಿ ರೂ.ದಾಟುವ ಕಾರಣ ಹೆಚ್ಚುವರಿ ಅನುದಾನಕ್ಕಾಗಿ ಪ.ಪಂ. ಆಗಬೇಕು ಎಂದು ಹೋರಾಟ ನಡೆದಿದ್ದರೂ ಈಗ 12 ವರ್ಷದ ಬಳಿಕ ನೇರವಾಗಿ ಪ. ಪಂ. ಆಗದೆ ಜನಸಂಖ್ಯಾ ಆಧಾರದಲ್ಲಿ ಮೇಲ್ದರ್ಜೆಗೇರುವ ಪ್ರಕ್ರಿಯೆ ಆರಂಭವಾಗಿದೆ.

ಚುನಾವಣೆ ಬಹಿಷ್ಕರಿಸಲಾಗಿತ್ತು
ಸೋಮೇಶ್ವರವನ್ನು ಮೇಲ್ದರ್ಜೆಗೇರಿಸುವ ನಿಟ್ಟಿನಲ್ಲಿ 2008ರಲ್ಲಿ ಚುನಾವಣೆಯನ್ನು ಬಹಿಷ್ಕರಿಸಲಾಗಿತ್ತು. ಸರ್ವ ಪಕ್ಷಗಳು ಪಂ. ಚುನಾವಣೆಯನ್ನು ಬಹಿಷ್ಕರಿಸಿದ್ದರಿಂದ 2008ರ ಜನವರಿ 6ರಿಂದ 2010 ಜೂನ್‌ವರೆಗೆೆ ಸುಮಾರು 2 ವರ್ಷ 5 ತಿಂಗಳ ಕಾಲ ಆಡಳಿತಾಧಿಕಾರಿಯ ಕೈಯಲ್ಲಿ ಆಡಳಿತವಿತ್ತು. ಈ ಸಂದರ್ಭ ರಾಜ್ಯದಲ್ಲಿದ್ದ ಬಿಜೆಪಿ ಸರಕಾರ ಸೋಮೇಶ್ವರ ಗ್ರಾ.ಪಂ.ಗೆ ಒಂದು ಕೋಟಿ ವಿಶೇಷ ಅನುದಾನ ಘೋಷಣೆ ಮಾಡಿ ಚುನಾವಣೆ ನಡೆಸಲು ಸ್ಥಳಿಯ ರಾಜಕೀಯ ಪಕ್ಷಗಳನ್ನು ಓಲೈಸಿದ್ದು ಅದರಂತೆ 2010ರ ಜೂನ್‌ನಲ್ಲಿ ಚುನಾವಣೆ ನಡೆದು ಎಂಟು ವರ್ಷಗಳಿಂದ ಬಿಜೆಪಿ ನೇತೃತ್ವದ ಆಡಳಿತ ಅಧಿಕಾರ ನಡೆಸುತ್ತಿದ್ದು 10 ವರ್ಷಗಳ ಹಿಂದಿನ ಹೋರಾಟಕ್ಕೆ ಈಗ ಮಾನ್ಯತೆ ಲಭಿಸಿದ್ದು ಪುರಸಭೆಯಾಗಿ ಮೇಲ್ದರ್ಜೆಗೇರುವ ಕನಸು ನನಸಾಗಿದೆ.ಹಲವು ವರ್ಷಗಳಿಂದ ಸೋಮೇಶ್ವರ ಗ್ರಾ.ಪಂ. ಬಿಜೆಪಿ ಭದ್ರಕೋಟೆಯಾಗಿತ್ತು. ಜಿ. ಪಂ. ಸದಸ್ಯರು ಮತ್ತು ಎರಡು ತಾ.ಪಂ. ಗಳಲ್ಲೂ ಬಿಜೆಪಿ ಸದಸ್ಯರಿದ್ದಾರೆ. ಈಗಿನ ಚುನಾಯಿತ ಸದಸ್ಯರ ಅಧಿಕಾರ ಅವಧಿ ಮುಂದಿನ ಚುನಾವಣೆವರೆಗೆ ಮುಂದುವರೆಯಲಿದ್ದು, ಪ್ರಸ್ತುತ ಇರುವ 61 ಸದಸ್ಯರ ಸಂಖ್ಯೆಯೂ ಕಡಿತಗೊಳ್ಳಲಿದೆ.

ಮುಖ್ಯಾಧಿಕಾರಿಯಾಗಿ ವಾಣಿ ಆಳ್ವ
ಉಳ್ಳಾಲ ನಗರಸಭೆಯಲ್ಲಿ ಮುಖ್ಯಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ವಾಣಿ ಆಳ್ವ ಅವರನ್ನು ನೂತನ ಸೋಮೇಶ್ವರ ಪುರಸಭೆಗೆ ಮುಖ್ಯಾಧಿಕಾರಿಯನ್ನಾಗಿ ಜಿಲ್ಲಾಡಳಿತ ನೇಮಿಸಿದೆ. ವಾರದೊಳಗೆ ವಾಣಿ ಆಳ್ವ ಅಧಿಕಾರ ಸ್ವೀಕರಿಸಿಲಿದ್ದು, ಈಗಿರುವ ಪಿಡಿಒ, ಕಾರ್ಯ ದರ್ಶಿ ಅಧಿಕಾರ ಹಸ್ತಾಂತರಿಸಿದ ಬಳಿಕ ಅಧಿಕೃತವಾಗಿ ಪುರಸಭೆಯ ಕಾರ್ಯ ಆರಂಭವಾಗಲಿದೆ.

ಹೊಸ ವ್ಯವಸ್ಥೆಗೆ ಬದಲಾಗುವ ಅಗತ್ಯ
ಸೋಮೇಶ್ವರ ಪುರಸಭೆಯಾಗಿ ಮೇಲ್ದರ್ಜೆಗೇರುವುದರಿಂದ ಅಭಿವೃದ್ಧಿಗೆ ಪೂರಕವಾಗಲಿದೆ. ಈ ಹಿಂದೆ ಮೇಲ್ದರ್ಜೆಗೇರಿಸಲು ಪ್ರಯತ್ನಿಸಿದ್ದೆ, ಈ ಬಾರಿ ನನ್ನದೇ ಇಲಾಖೆಯಡಿ ಬರುವುದರಿಂದ ಪ್ರಥಮ ಹಂತದಲ್ಲೇ ಪುರಸಭೆಯಾಗಿ ಮೇಲ್ದರ್ಜೆಗೇರಿಸುವ ನಿಟ್ಟಿನಲ್ಲಿ ಅಧಿಸೂಚನೆ ಹೊರಡಿಸಲಗಿದೆ.ಹೊಸ ವ್ಯವಸ್ಥೆಗೆ ಬದಲಾಗುವ ಅಗತ್ಯವಿದೆ.
– ಯು.ಟಿ. ಖಾದರ್‌, ನಗರಾಭಿವೃದ್ಧಿ ಸಚಿವರು

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಎಸ್ ವೈ ಎಸ್ ಹಿದಾಯತ್ ನಗರ ಶಾಖೆ ನೂತನ ಪಧಾಧಿಕಾರಿಗಳ ಆಯ್ಕೆ

May 1, 2026

ದೈಗೋಳಿ: ಸೇವಾಮನೋಭಾವ ಮೆರೆದ ವೀರಕೇಸರಿ ಫ್ರೆಂಡ್ಸ್ ತಂಡ

April 30, 2026

ಉಳ್ಳಾಲ ನಗರಸಭೆಯ ನಿಕಟಪೂರ್ವ ಉಪಾಧ್ಯಕ್ಷೆ ಮನೆಗೆ ಸ್ಪೀಕರ್ ಭೇಟಿ

April 30, 2026
Leave A Reply

Advertise
ಸಂಪರ್ಕಿಸಿ

13ಗಂಟೆಗಳ ಶಸ್ತ್ರಚಿಕಿತ್ಸೆ; ಯೆನೆಪೋಯ ವೈದ್ಯರ ತಂಡಕ್ಕೆ ಬಿಗ್ ಸೆಲ್ಯೂಟ್

April 28, 2026

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025
suddi

ಮಾಲೀಕನ ಮೇಲೆ ಆ್ಯಸಿಡ್ ದಾಳಿ ನಡೆಸಿದ ವ್ಯಕ್ತಿಗೆ 10 ವರ್ಷ ಜೈಲು ಶಿಕ್ಷೆ….!!

By UllalaVaniMay 1, 20260

ಉಡುಪಿ, ಮೇ. 01 : ಕೆಲಸದ ವಿಷಯದಲ್ಲಿ ಉಂಟಾದ ಸಣ್ಣ ಜಗಳದಿಂದಾಗಿ ತನ್ನ ಮಾಲೀಕನ ಮೇಲೆ ಆ್ಯಸಿಡ್ ಸುರಿದು ಕೊಲೆಗೆ ಯತ್ನಿಸಿದ…

ಎಸ್ ವೈ ಎಸ್ ಹಿದಾಯತ್ ನಗರ ಶಾಖೆ ನೂತನ ಪಧಾಧಿಕಾರಿಗಳ ಆಯ್ಕೆ

May 1, 2026

ಅತ್ಯಾಚಾರ ಕೇಸಲ್ಲಿ ಅಪ್ರಾಪ್ತೆಯ ಗರ್ಭಪಾತದ ಕಾನೂನು ಬದಲಾಯಿಸಿ- ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ತರಾಟೆ

April 30, 2026

2017ರ ಮುಕ್ಕಚ್ಚೇರಿ ಕೊಲೆ ಪ್ರಕರಣ; ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ

April 30, 2026
1 2 3 … 1,891 Next
Automatic YouTube Gallery

|| ULLALA TALUK HIGHLIGHTS || 01.05.2026

|| ULLALA TALUK HIGHLIGHTS

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted ...
and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
|| ULLALA TALUK HIGHLIGHTS || 01.05.2026
Now Playing
|| ULLALA TALUK HIGHLIGHTS || 01.05.2026
|| ULLALA TALUK HIGHLIGHTS 📍 Ullal | Dakshina Kannada | Coastal ...
|| ULLALA TALUK HIGHLIGHTS

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted ...
and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
"ಅಕ್ರಮ ಮಣ್ಣು ದಂಧೆಗೆ ಯಾರ ಬೆಂಬಲ..?ಅಧಿಕಾರಿಗಳ ಮೌನದ ಹಿಂದಿನ ಕಾರಣ..?
Now Playing
"ಅಕ್ರಮ ಮಣ್ಣು ದಂಧೆಗೆ ಯಾರ ಬೆಂಬಲ..?ಅಧಿಕಾರಿಗಳ ಮೌನದ ಹಿಂದಿನ ಕಾರಣ..?
ಉಳ್ಳಾಲದ ಬೆಲ್ಮಾ ಗ್ರಾಮದಲ್ಲಿ ಅಕ್ರಮ ಮಣ್ಣು ದಂಧೆ...!;ಸ್ಥಳದಲ್ಲಿದ್ದ ದೈವದ ಕಲ್ಲು ...
ಉಳ್ಳಾಲದ ಬೆಲ್ಮಾ ಗ್ರಾಮದಲ್ಲಿ ಅಕ್ರಮ ಮಣ್ಣು ದಂಧೆ...!;ಸ್ಥಳದಲ್ಲಿದ್ದ ದೈವದ ಕಲ್ಲು ತೆರವು

ಗ್ರಾಮಸ್ಥರ ಅಳಲು; ಅಧಿಕಾರಿಗಳ ಮೌನ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ...
ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates #Belma #Ullala
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version