Site icon Ullalavani

ಮಂಚಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ನೂತನ ಕಟ್ಟಡ

UN NETWORKS

ಇರಾ : ಮಂಚಿ ಪ್ರಾಥಮಿಕ ಆರೋಗ್ಯ ಕೇಂದ್ರದ ನೂತನ ಕಟ್ಟಡವನ್ನು ವೈದ್ಯಾಧಿಕಾರಿ ಡಾ. ಕೃಷ್ಣಮೂರ್ತಿ ಸಮ್ಮುಖ ಹಸ್ತಾಂತರ ಕಾರ್ಯ ನಡೆಯಿತು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮೂಲಕ 1.30 ಕೋಟಿ ರೂ. ಅಂದಾಜು ವೆಚ್ಚದಲ್ಲಿ ನಿರ್ಮಾಣಗೊಂಡ ಮಂಚಿ, ಇರಾ, ಕೊಲ್ನಾಡು, ಸಾಲೆತ್ತೂರು ಗ್ರಾಮ ಪಂಚಾಯತ್‍ಗಳ ವ್ಯಾಪ್ತಿಗೊಳಪಡುವ ಮಂಚಿ ಪ್ರಾಥಮಿಕ ಆರೋಗ್ಯ ಕೇಂದ್ರದ ನೂತನ ಕಟ್ಟಡ ನಿರ್ಮಾಣವಾಗಿದೆ. ಈ ಸಂದರ್ಭದಲ್ಲಿ ಕೊಲ್ನಾಡು ಜಿಲ್ಲಾ ಪಂಚಾಯತ್ ಸದಸ್ಯ ಎಂ.ಎಸ್. ಮುಹಮ್ಮದ್, ತಾಲೂಕು ಪಂಚಾಯತ್ ಉಪಾಧ್ಯಕ್ಷ ಅಬ್ಬಾಸ್ ಅಲಿ, ಮಂಚಿ ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರಮೀಳಾ, ಇರಾ ಗ್ರಾಮ ಪಂಚಾಯತ್ ಅಧ್ಯಕ್ಷ ಅಬ್ದುಲ್ ರಝಾಕ್ ಕುಕ್ಕಾಜೆ, ವೈದ್ಯಾಧಿಕಾರಿ ಡಾ. ರೋಹಿಣಿ, ಗ್ರಾಮ ಪಂಚಾಯತ್ ಸದಸ್ಯರಾದ ಇಬ್ರಾಹಿಂ ಜಿ.ಎಂ, ಮೊಯ್ದೀನ್ ಕುಂಞಿ, ಪುಷ್ಪ ಕಾಮತ್, ಪ್ರತಿಮ, ಗುತ್ತಿಗೆದಾರರಾದ ಪುಶ್ಪರಾಜ್ ಶೆಟ್ಟಿ ಹಾಜರಿದ್ದರು.

Exit mobile version