UN NETWORKS
ಮಂಜನಾಡಿ : ಮಂಜನಾಡಿ ಅಲ್ ಮದೀನಾ ಇಸ್ಲಾಮಿಕ್ ಕಾಂಪ್ಲೆಕ್ಸ್‌ನ ಸ್ಥಾಪಕ, ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಸಾಧಕ, ಹಿರಿಯ ಧಾರ್ಮಿಕ ವಿದ್ವಾಂಸ ಅಲ್‌ಹಾಜ್ ಪಿ.ಎಂ. ಅಬ್ಬಾಸ್ ಮುಸ್ಲಿಯಾರ್ (73) ಸೋಮವಾರ ಸಂಜೆ ನಿಧನರಾಗಿದ್ದು, ಅವರ ಅಂತಿಮ ಸಂಸ್ಕಾರವು ಇಂದು ಬೆಳಗ್ಗೆ ಜನ ಸಾಗರದ ನಡುವೆ ನಡೆಯಿತು. ಮಂಜನಾಡಿಯ ಅಲ್ ಮದೀನಾ ಇಸ್ಲಾಮಿಕ್ ಕಾಂಪ್ಲೆಕ್ಸ್ ಆವರಣದಲ್ಲಿ ಎ.ಪಿ. ಅಬೂಬಕರ್ ಮುಸ್ಲಿಯಾರ್ ಕಾಂತಪುರಂ ನೇತೃತ್ವದಲ್ಲಿ ಮಯ್ಯತ್ ನಮಾಝ್ ನಡೆಯಿತು.





ಕಳೆದ ಕೆಲವು ಸಮಯದಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅಬ್ಬಾಸ್ ಉಸ್ತಾದ್ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅವರು ಪತ್ನಿ, 5 ಗಂಡು ಮತ್ತು 3 ಹೆಣ್ಮಕ್ಕಳ ಸಹಿತ ಅಪಾರ ಶಿಷ್ಯ ವೃಂದ, ಅಭಿಮಾನಿ ಹಾಗೂ ಉಲಮಾ-ಉಮಾರಗಳು ಮತ್ತು ಕುಟುಂಬಸ್ಥರನ್ನು ಅಗಲಿದ್ದಾರೆ.ಈ ಸಂದರ್ಭ ಮಾಜಿ ಸಚಿವ ಯುಟಿ ಖಾದರ್, ಪೆರೋಡ್ ಅಬ್ದುರ್ರಹ್ಮಾನ್ ಸಖಾಫಿ, ಆಲಿಕುಂಞಿ ಮುಸ್ಲಿಯಾರ್ ಶಿರಿಯಾ ಮತ್ತಿತರ ಉಲಮಾ-ಉಮರಾಗಳ ಸಹಿತ ಸಾವಿರಾರು ಶಿಷ್ಯಂದಿರು, ಅಭಿಮಾನಿಗಳು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.


