UN NETWORKS
ತೊಕ್ಕೊಟ್ಟು : ತೊಕ್ಕೊಟ್ಟು ಫ್ಲೈಓವರ್ ಬಳಿ ಆಪರಿಚಿತ ಮೃತದೇಹ ಪತ್ತೆಯಾಗಿದ್ದು, ವಾರಿಸುದಾರರು ಉಳ್ಳಾಲ ಪೊಲೀಸ್ ಠಾಣೆಯನ್ನು ಸಂಪರ್ಕಿಸಬಹುದಾಗಿದೆ.

ಸುಮಾರು 45ರಿಂದ 50ರ ಹರೆಯದ ವಯಸ್ಸಿನ ವ್ಯಕ್ತಿಯಾಗಿದ್ದು, ಕಳೆದ ಹಲವು ಸಮಯಗಳಿಂದ ಇದೇ ಪರಿಸರದಲ್ಲಿ ಭಿಕ್ಷಾಟನೆ ಮಾಡಿಕೊಂಡು ರಾತ್ರಿವೇಳೆ ಫ್ಲೈಓವರ್ ಅಡಿಯಲ್ಲಿ ಮಲಗುತ್ತಿದ್ದರು. ಇದೀಗ ಗಂಭೀರ ಕಾಯಿಲೆಯಿಂದ ವ್ಯಕ್ತಿ ಮೃತಪಟ್ಟಿದ್ದಾರೆಂದು ಶಂಕಿಸಲಾಗಿದೆ. ಮೃತ ಶರೀರವನ್ನು ಮಂಗಳೂರಿನ ಸರಕಾರಿ ಆಸ್ಪತ್ರೆಯ ಶವಗಾರದಲ್ಲಿ ಇರಿಸಲಾಗಿದ್ದು ವಾರಿಸುದಾರರು ಉಳ್ಳಾಲ ಪೊಲೀಸ್ ಠಾಣೆಯನ್ನು ಸಂಪರ್ಕಿಸಬೇಕಾಗಿ ವಿನಂತಿ.


