Site icon Ullalavani

ಇರಾ : ರಂಗಮಂದಿರಕ್ಕೆ ಶಿಲಾನ್ಯಾಸ

UN NETWORKS

ಇರಾ : ಸಾರ್ವಜನಿಕ ಶಿಕ್ಷಣ ಇಲಾಖೆ, ದ.ಕ. ಜಿ. ಪಂ ಹಿ ಪ್ರಾ ಶಾಲೆ ಇರಾ ಪರಪ್ಪು ಮತ್ತು ಇರಾ ಗ್ರಾಮ ಪಂಚಾಯಿತಿ ಸಹಯೋಗದೊಂದಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅನುದಾನದಿಂದ ನಿರ್ಮಾಣಗೊಳ್ಳುವ ರಂಗಮಂದಿರಕ್ಕೆ ಮಂಗಳೂರು ಕ್ಷೇತ್ರದ ಶಾಸಕ ಯು. ಟಿ. ಖಾದರ್ ಶಿಲಾನ್ಯಾಸಗೈದರು.

ಬಳಿಕ ಮಾತನಾಡಿದ ಅವರು ಕ್ಷೇತ್ರದ ಮೂಲ ಸೌಕರ್ಯಗಳ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ. ಇರಾ ಗ್ರಾಮದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ನಡೆದಿದೆ. ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ನೀಡುವಲ್ಲಿ ರಂಗಮಂದಿರವೂ ಕೂಡ ಸಹಕಾರಿಯಾಗಲಿದೆ. ಶಾಲಾ ಮಕ್ಕಳಿಗೆ ಶುಭ ಹಾರೈಸಿದ ಅವರು ಬಡವನಾಗಿ ಹುಟ್ಟಿದರೂ ಬಡವನಾಗಿಯೇ ಸಾಯಬೇಕಿಲ್ಲ. ಉತ್ತಮ ಶಿಕ್ಷಣವನ್ನು ಪಡೆದು ವಿದ್ಯಾವಂತರಾಗಬೇಕು ಎಂದು ತಿಳಿಸಿದರು. ಇರಾ ಗ್ರಾಮ ಪಂಚಾಯಿತಿ ಅಧ್ಯಕ್ಷ ಅಬ್ದುಲ್ ರಝಾಕ್ ಕುಕ್ಕಾಜೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಕಾರ್ಯಕ್ರಮದಲ್ಲಿ ಕುರ್ನಾಡು ಕ್ಷೇತ್ರದ ಜಿಲ್ಲಾ ಪಂಚಾಯಿತಿ ಸದಸ್ಯೆ ಮಮತಾ ಗಟ್ಟಿ , ಬಂಟ್ವಾಳ ತಾಲೂಕು ಪಂಚಾಯಿತಿ ಅಧ್ಯಕ್ಷ ಚಂದ್ರಹಾಸ ಕರ್ಕೇರ, ಎಸ್.ಡಿ.ಎಂ.ಸಿ ಅಧ್ಯಕ್ಷ ಸೈಯದ್ ಪಿ. ಎಂ, ಗ್ರಾಮ ಪಂಚಾಯಿತಿ ಸದಸ್ಯರುಗಳಾದ ಎಂ.ಬಿ. ಉಮ್ಮರ್ ಮತ್ತು ಮೊಯ್ದಿನ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ನಳಿನಿ ಹಾಗೂ ಶಾಲಾ ಮುಖ್ಯ ಶಿಕ್ಷಕಿ ಪ್ರಸನ್ನ ವಿ. ಉಪಸ್ಥಿತರಿದ್ದರು.

Exit mobile version