Site icon Ullalavani

ಇರಾ : ಶಾಸಕರಿಂದ ಸಾರ್ವಜನಿಕರಿಂದ ಅಹವಾಲು ಸ್ವೀಕಾರ

UN NETWORKS

ಇರಾ : ಮಂಗಳೂರು ವಿಧಾನ ಸಭಾ ಶಾಸಕರು, ಮಾಜಿ ಸಚಿವರಾದ ಯು.ಟಿ ಖಾದರ್ ರವರು ಇಂದು ಮಲಿಯಾಳಿ ಬಿಲ್ಲವ ಸಭಾ ಭವನದಲ್ಲಿ ಗ್ರಾಮಸ್ಥರ ಅಹವಾಲು ಸ್ವೀಕರಿಸಿದರು.

ಗ್ರಾಮೀಣ ಭಾಗದಲ್ಲಿ ಸಮಸ್ಯೆಗಳನ್ನು ನೀಗಿಸುವಲ್ಲಿ ಪ್ರಾಮಾಣಿಕವಾಗಿ ಪ್ರಯತ್ನಿಸಲಾಗಿದ್ದು ಮುಂದಿನ ದಿನಗಳಲ್ಲಿ ಗ್ರಾಮಸ್ಥರ ಬೇಡಿಕೆಗೆ ಅನುಸಾರವಾಗಿ ಹಂತ ಹಂತವಾಗಿ ಮೂಲಭೂತ ಅವಶ್ಯಕತೆ ಹಾಗೂ ಅಭಿವೃದ್ದಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದೆಂದು ಈ ಸಂದರ್ಭದಲ್ಲಿ ಶಾಸಕರು ತಿಳಿಸಿದರು. ಗ್ರಾಮ ಪಂಚಾಯತ್ ನ ಅಧ್ಯಕ್ಷರಾದ ಅಬ್ದುಲ್ ರಝಾಕ್ ಕುಕ್ಕಾಜೆ  ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಕುರ್ನಾಡು ಜಿಲ್ಲಾ ಪಂಚಾಯತ್ ಸದಸ್ಯರಾದ ಮಮತಾ ಡಿ ಎಸ್ ಗಟ್ಟಿ ಪ್ರಸ್ತಾವಿಕ ಮಾತುಗಳನ್ನಾಡಿದರು. ಬಂಟ್ವಾಳ ತಾಲೂಕು ಪಂಚಾಯತ್ ಅಧ್ಯಕ್ಷರಾದ ಚಂದ್ರಹಾಸ ಕರ್ಕೇರ,ಗ್ರಾಮ ಪಂಚಾಯತ್ ಸದಸ್ಯರಾದ ಎಂ.ಬಿ ಉಮ್ಮರ್,ಗೋಪಾಲ ಅಶ್ವಥಡಿ,ಮೊಯಿದ್ದಿನ್ ಕುಂಞ,ರಮೇಶ್ ಪೂಜಾರಿ, ತುಳಸಿ, ಪಾರ್ವತಿ,ಸವಿತಾ,ಪಂಚಾಯತ್ ಅಭಿವೃದ್ದಿ ಅಧಿಕಾರಿ ನಳಿನಿ ಎ.ಕೆ ಉಪಸ್ಥಿತರಿದ್ದರು.

Exit mobile version