UN NETWORKS
ಉಳ್ಳಾಲ : ಉಳ್ಳಾಲ ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿ ಹಾಗೂ ಸೌತ್ ಕೆನರಾ ಫೋಟೊಗ್ರಾಫರ್ಸ್ ಎಸೋಸಿಯೇಷನ್ ಉಳ್ಳಾಲ ವಲಯ ಆಶ್ರಯದಲ್ಲಿ ಉಳ್ಳಾಲ ಅಬ್ಬಕ್ಕ ಸರ್ಕಲ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆ ನಡೆಯಿತು.
ಮಾಜಿ ಶಾಸಕ ಜಯರಾಮ ಶೆಟ್ಟಿ ಧ್ವಜಾರೋಹಣಗೈದರು. ಸಯ್ಯದ್ ಮದನಿ ದರ್ಗಾ ಉಳ್ಳಾಲ ಅಧ್ಯಕ್ಷ ಅಬ್ದುಲ್ ರಶೀದ್ ಅಧ್ಯಕ್ಷತೆ ವಹಿಸಿದ್ದರು. ಉಳ್ಳಾಲ ಮೊಗವೀರ ಸಂಘ ಅಧ್ಯಕ್ಷ ಭರತ್ ಕುಮಾರ್, ಶ್ರೀ ಚೀರುಂಭ ಭಗವತಿ ಕ್ಷೇತ್ರ ಅಧ್ಯಕ್ಷ ಚಂದ್ರಹಾಸ ಉಳ್ಳಾಲ್, ನಿರ್ಮಲಾ ಕಾನ್ವೆಂಟಿನ ಮುಖ್ಯಸ್ಥೆ ಸಿ.ಎಮ್ಮಾ ಜೋಸೆಫ್, ಸೌತ್ ಕೆನರಾ ಫೋಟೊಗ್ರಾಫರ್ಸ್ ಎಸೋಸಿಯೇಷನ್ ಸ್ಥಾಪಕಾಧ್ಯಕ್ಷ ಅರುಣ್ ಕುಮಾರ್ ಉಳ್ಳಾಲ್, ಎಸ್.ಕೆ.ಪಿ ವಿವಿದೋದ್ದೇಶ ಸಹಕಾರಿ ಸಂಘದ ನಿರ್ದೇಶಕ ಸಂತೋಷ್ ಕುಮಾರ್ ಮಾರ್ಲ, ಉಳ್ಳಾಲದ ಎಎಸ್ ಐ ಮಂಜಪ್ಪ, ಜಿ.ಪಂ ಸದಸ್ಯೆ ಧನಲಕ್ಷ್ಮೀ ಗಟ್ಟಿ, ಉಳ್ಳಾಲ ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿ ಅಧ್ಯಕ್ಷ ದಿನಕರ್ ಉಳ್ಳಾಲ್, ಸೌತ್ ಕೆನರಾ ಫೋಟೋಗ್ರಾಫರ್ಸ್ ಎಸೋಸಯೇಷನ್ ಅಧ್ಯಕ್ಷ ಚಿದಾನಂದ ಎ ಉಪಸ್ಥಿತರಿದ್ದರು.