UN NETWORKS
ಉಳ್ಳಾಲ : ಆರ್ಟಿಕಲ್ 370ರದ್ದು ವಿರುದ್ಧ ಉಗ್ರರು ದೇಶಾದ್ಯಂತ ವಿಧ್ವಂಸಕ ಕೃತ್ಯ ನಡೆಸುವ ಸಾಧ್ಯತೆ ಇದೆ ಎಂಬ ಸೂಚನೆ ಸಿಕ್ಕ ಹಿನ್ನೆಲೆಯಲ್ಲಿ ರಾಜ್ಯ ಗುಪ್ತಚರ ಇಲಾಖೆಯ ಮಾಹಿತಿಯ ಅನುಸಾರ ಶುಕ್ರವಾರ ಕೊಣಾಜೆ ಹಾಗೂ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರಮುಖ ಸಂಸ್ಥೆಗಳಲ್ಲಿ ಬಾಂಬ್ ಪತ್ತೆ ದಳ, ಶ್ವಾನ ದಳದಿಂದ ಪರಿಶೀಲನೆ ನಡೆಯಿತು.

ದುಷ್ಕರ್ಮಿಗಳು ದೇಶಾದ್ಯಂತ ವಿಧ್ವಂಸಕ ಕೃತ್ಯ ನಡೆಸುವ ಸಾಧ್ಯತೆ ಇರುವುದರಿಂದ ಕರ್ನಾಟಕದಲ್ಲಿ ಶೈಕ್ಷಣಿಕ ಹಬ್ ಆಗಿ ಗುರುತಿಸಿಕೊಂಡಿರುವ ಕೊಣಾಜೆ ಹಾಗೂ ಉಳ್ಳಾಲ ಭಾಗದ ಪ್ರತಿಷ್ಠಿತ ಸಂಸ್ಥೆಗಳಾದ ಮುಡಿಪಿನ ಇನ್ಫೋಸಿಸ್, ಸೂರ್ಯ ಇನ್ಫೋಟೆಕ್, ಸೋಮೇಶ್ವರ ದೇವಸ್ಥಾನ ತೀರ,ದೇರಳಕಟ್ಟೆಯ ಕೆ.ಎಸ್. ಹೆಗ್ಡೆ ಆಸ್ಪತ್ರೆ ಹಾಗೂ ಯೇನೆಪೊಯ ಆಸ್ಪತ್ರೆಯಲ್ಲಿ ತಪಾಸಣೆ ನಡೆಸಿದೆ.ರಾಜ್ಯ ಗುಪ್ತಚರ ಇಲಾಖೆಯ ನಿರ್ದೇಶನದಂತೆ ಹೈ ಅಲರ್ಟ್ ಆಗುವ ಸೂಚನೆ ನೀಡಲಾಗಿದೆ.ಇವೆಲ್ಲ ಸಹಜ ರೀತಿಯ ಪರಿಶೀಲನೆ ಪ್ರಕ್ರಿಯೆ ಎಂದು ಕೊಣಾಜೆ ಮತ್ತು ಉಳ್ಳಾಲ ಠಾಣಾಧಿಕಾರಿಗಳು ತಿಳಿಸಿದ್ದಾರೆ.


