UN NETWORKS
ತಲಪಾಡಿ: ತಲಪಾಡಿಯ ಶಾರದಾ ವಿದ್ಯಾನಿಕೇತನ ಪದವಿ ಪೂರ್ವ ಕಾಲೇಜಿನ ಧ್ಯಾನ ಮಂದಿರದಲ್ಲಿ ಸಂಸ್ಥೆಯ ಕನ್ನಡ ಉಪನ್ಯಾಸಕ ಹಾಗೂ ಸಂಗೀತ ಶಿಕ್ಷಕರಾದ ಗಾನ ಶ್ರೀ ಪುರಸ್ಕೃತ ಸುರೇಶ್ ರಾವ್ ಅತ್ತೂರು ಇವರಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ ಮತ್ತು ರಸಾಯನ ಶಾಸ್ತ್ರ ಉಪನ್ಯಾಸಕಿಯಾದ ಸೌಮ್ಯ ರಾವ್ ಇವರಿಂದ ಹಿಂದುಸ್ತಾನಿ ಶಾಸ್ತ್ರೀಯ ಸಂಗೀತ ಪ್ರಸ್ತುತ ಪಡಿಸಲಾಯಿತು.

ಪ್ರಥಮ ಪಿಯುಸಿ ವಿದ್ಯಾರ್ಥಿ ಪ್ರಜ್ವಲ್ ಹಾಗೂ ದ್ವಿತೀಯ ಪಿ.ಯು.ಸಿ.ಯ ಅಕ್ಷರ್ ಮೃದಂಗ ಸಹಕಾರ ನೀಡಿದರು. ದ್ವಿತೀಯ ಪಿ.ಯು.ಸಿ.ಯ ಸುದೇಶ್ ತಬಲಾ ಸಹಕಾರ ನೀಡಿದರು. ದ್ವಿತೀಯ ಪಿ.ಯು.ಸಿ.ಯ ದೀಪ್ತಿ ವಯೋಲಿನ್ ಸಹಕಾರ ನೀಡಿದರು. ಕಾರ್ಯಕ್ರಮದಲ್ಲಿ ಶಾರದಾ ಸಮೂಹ ಸಂಸ್ಥೆಗಳ ಅಧ್ಯಕ್ಷರಾದ ಪ್ರೊ| ಎಂ.ಬಿ.ಪುರಾಣಿಕ್, ಕಾಲೇಜಿನ ಪ್ರಾಂಶುಪಾಲ ವಿನಾಯಕ್ ಬಿ.ಜಿ, ಶಾರದಾ ವಿದ್ಯಾನಿಕೇತನ ಪಬ್ಲಿಕ್ ಸ್ಕೂಲ್ನ ಪ್ರಾಂಶುಪಾಲ ಸುಷ್ಮಾ ದಿನಕರ್, ಶಾಲಾ ಆಡಳಿತಾಧಿಕಾರಿ ವಿವೇಕ್ ತಂತ್ರಿ ಉಪಸ್ಥಿತರಿದ್ದರು.


