UN NETWORKS
ಹರೇಕಳ : ಕ್ರೀಡೆ ಮನೋರಂಜನೆ ಮಾತ್ರ ಅಲ್ಲ, ಅದರಲ್ಲಿ ನಾವು ಕಲಿಯಬೇಕಾದಂತಹ ಬಹಳಷ್ಟು ಮೌಲ್ಯಗಳು ಇವೆ. ಕ್ರೀಡೆಯು ನಮಲ್ಲಿ ಪರಸ್ಪರ ಒಗ್ಗೂಡಿಸಿ ಏಕತೆಯ ಭಾವವನ್ನು ಮೂಡಿಸುವುದರೊಂದಿಗೆ ದೈಹಿಕವಾಗಿ ಸದೃಢವಾಗಿ ಬೆಳೆಯಲು ಸಹಕಾರಿಯಾಗಿದೆ ಎಂದು ನಿವೃತ ಮುಖ್ಯ ಶಿಕ್ಷಕ ರವೀಂದ್ರ ರೈ ಹರೇಕಳ ಅವರು ಹೇಳಿದರು.

ಅವರು ಹರೇಕಳ ನ್ಯೂಪಡ್ಪುವಿನ ಸರಕಾರಿ ಪ್ರೌಢಶಾಲೆಯಲ್ಲಿ ನಡೆದ ಉಳ್ಳಾಲ ಹೋಬಳಿ ಮಟ್ಟದ ಪ್ರೌಢಶಾಲಾ ಬಾಲಕ ಬಾಲಕಿಯರ ವಾಲಿಬಾಲ್ ಪಂದ್ಯಾಟದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.
ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದ ಉದ್ಯಮಿ ಹಾಗೂ ಪಂಚಾಯಿತಿ ಸದಸ್ಯರಾದ ಮಹಾಬಲ ಹೆಗ್ಡೆ ಅವರು ಗ್ರಾಮೀಣ ಕ್ರೀಡಾ ಪ್ರತಿಭೆಗಳಿಗೂ ಇಂದು ಹೆಚ್ಚಿನ ಅವಕಾಶಗಳು ಸಿಗುತ್ತಿದು ಗ್ರಾಮೀಣ ವಿದ್ಯಾರ್ಥಿಗಳು ಇಂತಹ ಅವಕಾಶಗಳನ್ನು ಬಳಸಿಕೊಂಡು ರಾಷ್ಟ್ರಮಟ್ಟದಲ್ಲಿ ಮಿಂಚಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ನೀವೃತ್ತ ಮುಖ್ಯ ಶಿಕ್ಷಕ ರವೀಂದ್ರ ರೈ ಹರೇಕಳ, ದಾನಿ ಅಬ್ದುಲ್ ಮಜೀದ್, ನಿವೃತ್ತ ಶಿಕ್ಷಕ ಲಿಲ್ಲಿ ಡಿಸೋಜ, ಅಂಗನವಾಡಿ ಶಿಕ್ಷಕಿ ಪುಷ್ಪಾ ಹಾಗೂ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಗಳಿಸಿದ ರಹೀನ್ ತೌಶಿಯಾ ಅವರನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಹರೇಕಳ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಅನಿತಾ ಡಿಸೋಜ, ಸಮಾಜಸೇವಕ ಪ್ರಸಾದ್ ರೈ ಕಲ್ಲಿಮಾರ್, ಸಮಾಜ ಸೇವಕ ಹರೇಕಳ ಹಾಜಬ್ಬ, ಮಾಜಿ ತಾಲೂಕು ಪಂಚಾಯಿತಿ ಸದಸ್ಯ ಮುಸ್ತಫಾ ಹರೇಕಳ, ಅಬ್ದುಲ್ ಸತ್ತಾರ್, ಎಸ್‍ಡಿಎಂಸಿ ಸದಸ್ಯರಾದ ಮಜೀದ್, ಪಂಚಾಯಿತಿ ಸದಸ್ಯರಾದ ಬಶೀರ್, ಬದ್ರುದ್ದೀನ್, ಸಾಲಿ, ಕಲ್ಯಾಣಿ, ದೈಹಿಕ ಶಿಕ್ಷಣ ಹಾಗೂ ಪರಿವೀಕ್ಷಣಾ ಅಧಿಕಾರಿ ವಿಷ್ಣು ನಾರಾಯಣ ಹೆಬ್ಬಾರ್, ದೈಹಿಕ ಶಿಕ್ಷಕರಾದ ತ್ಯಾಗಂ ಹರೇಕಳ, ರಾಜೀವ ನಾಯ್ಕ, ಮೋಹನ್ ಶಿರ್ಲಾಲ್ ಮೊದಲಾದವರು ಉಪಸ್ಥಿತರಿದ್ದರು. ಶಾಲಾ ಮುಖ್ಯೋಪಾಧ್ಯಾಯಿನಿ ರೂಪ ಅವರು ಸ್ವಾಗತಿಸಿದರು. ದೈಹಿಕ ಶಿಕ್ಷಕಿ ಸುರೇಖಾ ಹರೀಶ್ ಪೂಜಾರಿ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿ ಅನುರಾಧ ವಂದಿಸಿದರು.


