UN NETWORKS
ತೊಕ್ಕೊಟ್ಟು : ತೊಕ್ಕೊಟ್ಟು ಮೊಸರುಕುಡಿಕೆ ಉತ್ಸವ ಎಂದರೆ ಪ್ರದೇಶದ ಉತ್ಸವವಾಗಿದೆ. ಸಾವಿರಾರು ಸಂಖ್ಯೆಯಲ್ಲಿ ಜನ ಭಾಗವಹಿಸುವ ಮೂಲಕ ಉತ್ಸವಕ್ಕೆ ಹೆಚ್ಚಿನ ಹುರುಪು ದೊರೆತಿದೆ ಎಂದು ದೇರಳಕಟ್ಟೆ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಡಳಿತ ಮೊಕ್ತೇಸರ ಚಂದ್ರಹಾಸ ಅಡ್ಯಂತಾಯ ಅಭಿಪ್ರಾಯಪಟ್ಟರು.

























ತೊಕ್ಕೊಟ್ಟು ಭಟ್ನಗರದ ಶ್ರೀ ಜೈ ವೀರ ಮಾರುತಿ ವ್ಯಾಯಾಮ ಶಾಲೆ ಟ್ರಸ್ಟ್ ಇದರ ವತಿಯಿಂದ ನಡೆಯುವ ಶ್ರೀ ಕೃಷ್ಣ ಜನ್ಮಾಷ್ಟಮಿ 59ನೇ ವರ್ಷದ ತೊಕ್ಕೊಟ್ಟು ಮೊಸರು ಕುಡಿಕೆ ಉತ್ಸವಕ್ಕೆ ಚಾಲನೆ ನೀಡಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಂಬಯಿ ಸಫಲ್ಯ ಸೇವಾ ಸಂಘದ ಅಧ್ಯಕ್ಷ ಶ್ರೀನಿವಾಸ ಪಿ. ಸಪಲ್ಯ, ಸೋಮೇಶ್ವರ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಉಳ್ಳಾಲ ಶ್ರೀ ಚೀರುಂಭ ಭಗವತೀ ಕ್ಷೇತ್ರ ಅಧ್ಯಕ್ಷ ಚಂದ್ರಹಾಸ್ ಉಳ್ಳಾಲ್, ಬಂಟರ ಸಂಘ ಉಳ್ಳಾಲ ವಲಯ ಅಧ್ಯಕ್ಷ ಜಿತೇಂದ್ರ ಶೆಟ್ಟಿ, ಉದ್ಯಮಿ ಚಂದ್ರಹಾಸ್ ಪಂಡಿತ್ ಹೌಸ್, ಶಬರಿಮಲೆ ಸಂರಕ್ಷಣಾ ಸಮಿತಿ ಅಧ್ಯಕ್ಷ ಗಣೇಶ್ ಪೊದುವಾಲ್,ಪೊಲದವರ ಯಾನೆ ಗಟ್ಟಿಯವರ ಸಮಾಜ ಸೇವಾ ಸಂಘದ ಅಧ್ಯಕ್ಷ ಪವಿತ್ರ ಕುಮಾರ್ ಗಟ್ಟಿ, ಜಿಲ್ಲಾ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿ ಮಮತಾ ರೈ, ಉಳ್ಳಾಲ ನಗರಸಭೆ ಸದಸ್ಯ ಗೀತಾ ಬಾೈ, ಮುನ್ನೂರು ಯುವಕ ಮಂಡಲದ ಅಧ್ಯಕ್ಷ ಎಸ್.ಶಶೀಂದ್ರ ಕುಕ್ಯಾನ್, ತೊಕ್ಕೊಟ್ಟು ಗಣೇಶನಗರದ ಸಾರ್ವಜನಿಕ ಶ್ರೀ ಗಣೇಶ ಸೇವಾ ಸಮಿತಿ ಅಧ್ಯಕ್ಷ ಸದಾಶಿವ ಜೆ.ಕೆ ಉಪಸ್ಥಿತರಿದ್ದರು.
ಟ್ರಸ್ಟೀ ಅಧ್ಯಕ್ಷ ವಿಠಲ ಶ್ರೀಯಾನ್ ಸ್ವಾಗತಿಸಿದರು. ರೋಹಿತ್ ಉಳ್ಳಾಲ್ ಕಾರ್ಯಕ್ರಮ ನಿರೂಪಿಸಿದರು.


