UN NETWORKS
ಇನೋಳಿ : ಇನೋಳಿ ಸರ್ಕಾರಿ ಪ್ರೌಢಶಾಲೆಯ ಆಶ್ರಯದಲ್ಲಿ ಬಿಐಟಿ ಮೈದಾನದಲ್ಲಿ ನಡೆದ ಮಂಗಳೂರು ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಹ್ಯಾಂಡ್‍ಬಾಲ್ ಪಂದ್ಯಾಟದ ಸಮಾರೋಪ ಸಮಾರಂಭ ನಡೆಯಿತು.
ಪ್ರೌಢಶಾಲಾ ವಿಭಾಗದಲ್ಲಿ ಉಳ್ಳಾಲ ಭಾರತಿ ಆಂಗ್ಲ ಮಾಧ್ಯಮ ಶಾಲೆ ಪ್ರಥಮ, ಉಳ್ಳಾಲ ಭಾರತ್ ಪ್ರೌಢಶಾಲೆ ದ್ವಿತೀಯ. ಬಾಲಕಿಯರ ವಿಭಾಗದಲ್ಲಿ ಉಳ್ಳಾಲ ಭಾರತಿ ಆಂಗ್ಲ ಮಾಧ್ಯಮ ಪ್ರೌಢಶಾಲೆ ಪ್ರಥಮ, ಉಳ್ಳಾಲ ಭಾರತ್ ಪ್ರೌಢಶಾಲೆ ದ್ವಿತೀಯ ಸ್ಥಾನ ಪಡೆಯಿತು. ಪ್ರಾಥಮಿಕ ಶಾಲಾ ಬಾಲಕರ ವಿಭಾಗದಲ್ಲಿ ಉಳ್ಳಾಲ ಭಾರತಿ ಆಂಗ್ಲ ಮಾಧ್ಯಮ ಶಾಲೆ ಪ್ರಥಮ, ನೀರುಮಾರ್ಗ ನವಚೇತನ ಆಂಗ್ಲಮಾಧ್ಯಮ ಶಾಲೆ ದ್ವಿತೀಯ.
ಬಾಲಕಿಯರ ವಿಭಾಗದಲ್ಲಿ ನೀರುಮಾರ್ಗ ನವಚೇತನ ಆಂಗ್ಲಮಾಧ್ಯಮ ಶಾಲೆ ಪ್ರಥಮ ಹಾಗೂ ಉಳ್ಳಾಲ ಭಾರತಿ ಆಂಗ್ಲ ಮಾಧ್ಯಮ ಶಾಲೆ ದ್ವಿತೀಯ ಸ್ಥಾನ ಪಡೆಯಿತು.