UN NETWORKS
ಸರ್ವರಿಗೂ ಪ್ರೀತಿಗೆ ಪಾತ್ರವಾಗಿರುವ ಕ್ಷೇತ್ರದ ಮೂಲಕ ಪ್ರದೇಶದಲ್ಲಿ ಸೌಹಾರ್ದತೆ ನೆಲೆಸಲು ಸಾಧ್ಯವಾಗಿದೆ, ಮುಂದಿನ ದಿನಗಳಲ್ಲಿ ಗ್ರಾಮ ಅತ್ಯಂತ ಅಭಿವೃದ್ಧಿ ಹೊಂದಿದ ಪ್ರದೇಶವಾಗಲಿದೆ ಎಂದು ಶಾಸಕ ಯು.ಟಿ.ಖಾದರ್ ಹೇಳಿದರು.

ಹತ್ತು ಲಕ್ಷ ಅನುದಾನದಲ್ಲಿ ಅಂಬ್ಲಮೊಗರು ಗ್ರಾಮದ ಎಲಿಯಾರ್ ಹೋಲಿ ಕ್ರಾಸ್ ಚರ್ಚ್ ರಸ್ತೆ ಕಾಂಕ್ರೀಟ್ ಕಾಮಗಾರಿಗೆ ಭಾನುವಾರ ಶಿಲಾನ್ಯಾಸಗೈದು ಮಾತನಾಡಿದರು. ಯಾವುದೇ ಗ್ರಾಮದ ಅಭಿವೃದ್ಧಿ ಜನಪ್ರತಿನಿಧಿಗಳ ಜವಾಬ್ದಾರಿ, ಶೀಘ್ರ ಅಡ್ಯಾರ್ ಸೇತುವೆ ನಿರ್ಮಾಣವಾಗಲಿದ್ದು ನಗರಕ್ಕೆ ಹತ್ತಿರವಾಗಲಿದೆ. ಉಳ್ಳಾಲ ತಾಲೂಕು ಆಗಿ ಘೋಷಣೆ ಆಗಿರುವುದರಿಂದ ಎಲ್ಲಾ ಇಲಾಖೆಗಳು ಬರುವುದರಿಂದ ಕ್ಷೇತ್ರದ ಅಭಿವೃದ್ಧಿಗೆ ಪೂರಕವಾಗಲಿದೆ ಎಂದು ತಿಳಿಸಿದರು. ಎಲಿಯಾರ್ ಹೋಲಿ ಕ್ರಾಸ್ ಚರ್ಚ್ ನ ಧರ್ಮಗುರು ಗಿಲ್ಬರ್ಟ್ ಡಿಸೋಜ ಅಧ್ಯಕ್ಷ ವಹಿಸಿದ್ದರು. ಅಂಬ್ಲಮೊಗರು ಗ್ರಾಮ ಪಂಚಾಯಿತಿ ಅಧ್ಯಕ್ಷ ಮೊಹಮ್ಮದ್ ರಫೀಕ್, ಉಪಾಧ್ಯಕ್ಷೆ ಯಶೋಧ, ಸದಸ್ಯರಾದ ಮನೋಹರ್ ಪೂಜಾರಿ, ಜ್ಯೋತಿ ಪಾಯಸ್, ತಾಲೂಕು ಪಂಚಾಯಿತಿ ಸದಸ್ಯೆ ಶಶಿಪ್ರಭಾ ಶೆಟ್ಟಿ, ಚರ್ಚ್ ಪಾಲನಾ ಮಂಡಳಿ ಉಪಾಧ್ಯಕ್ಷ ಓಝ್ವಲ್ಡ್ ರೋಸ್ ಇನ್ನಿತರರು ಉಪಸ್ಥಿತರಿದ್ದರು.
`ಕ್ಷೇತ್ರದ ಎಲ್ಲಾ ಚರ್ಚ್ ಗಳನ್ನು ಗುರುತಿಸಿ ಅನುದಾನ ಬಿಡುಗಡೆಗೊಳಿಸಲಾಗಿದೆ, ಅಧಿಕಾರಕ್ಕಿಂತ ಅಭಿವೃದ್ಧಿ ಶಾಶ್ವತ. ಪರಿಸರದಲ್ಲಿ ಶಾಂತಿ, ಸೌಹಾರ್ದತೆ ಕಾಪಾಡಿಕೊಂಡು ಬರುವ ಜವಾಬ್ದಾರಿ ಯುವಸಮುದಾಯದ ಮೇಲಿದ್ದು, ಹಿರಿಯರ ಮಾರ್ಗದರ್ಶನ ಪಾಲಿಸಿ’.
ಯು.ಟಿ.ಖಾದರ್, ಶಾಸಕ


