ಉಳ್ಳಾಲ್ ನ್ಯೂಸ್ ನೆಟ್ ವರ್ಕ್
ದೇರಳಕಟ್ಟೆ: ಮಲೇರಿಯಾ ಹಾಗೂ ಡೆಂಗೆ ಎಚ್ ಇಎನ್1 ಸಾಂಕ್ರಾಮಿಕ ರೋಗಗಳು ಹರಡದಂತೆ ಮುನ್ನೆಚ್ಚರಿಕೆ ಕ್ರಮವನ್ನು ಸಾರ್ವಜನಿಕರು ಕೈಗೊಳ್ಳಬೇಕು. ಜಾಗೃತಿ ಮೂಡಿಸಲು ವಿದ್ಯಾ ಸಂಸ್ಥೆಯ ವತಿಯಿಂದ ಜಾಥಾ ಹಮ್ಮಿಕೊಳ್ಳಲಾಗಿದೆ ಎಂದು ವಿದ್ಯಾರತ್ನ ಆಂಗ್ಲ ಮಾಧ್ಯಮ ಶಾಲೆಯ ಆಡಳಿತ ನಿರ್ದೇಶಕ ಕೆ. ರವೀಂದ್ರ ಶೆಟ್ಟಿ ಉಳಿದೊಟ್ಟು ಹರೇಕಳ ಹೇಳಿದ್ದಾರೆ.
ದೇರಳಕಟ್ಟೆಯ ವಿದ್ಯಾರತ್ನ ಆಂಗ್ಲ ಮಾಧ್ಯಮ ಶಾಲೆಯ ಸ್ಕೌಟ್ಸ್ ಗೈಡ್ಸ್ , ರತ್ನ ಇಕೋ ಕ್ಲಬ್ ಹಾಗೂ ವಿಜ್ಞಾನ ಸಂಘದ ಆಶ್ರಯದಲ್ಲಿ ಮಂಗಳವಾರದಂದು ಶಾಲೆಯಿಂದ ಬೆಳ್ಮ ಗ್ರಾಮ ಪಂಚಾಯಿತಿ ಕಚೇರಿವರೆಗೆ ನಡೆದ ಡೆಂಗೆ ಜಾಗೃತಿ ಜಾಥಾ ನೇತೃತ್ವ ವಹಿಸಿ ಮಾತನಾಡಿದರು.















ದೇರಳಕಟ್ಟೆ ಪರಿಸರದಲ್ಲಿ ಬಹು ಮುಖ್ಯವಾಗಿ ಘನತ್ಯಾಜ್ಯ ವಿಲೇವಾರಿ ಸಮರ್ಪಕವಾಗಿರಬೇಕು. ತಪ್ಪಿದಲ್ಲಿ ಅದರಿಂದ ಸಾಂಕ್ರಾಮಿಕ ರೋಗಗಳು ಹರಡುವುದು ಸರ್ವೆ ಸಾಮಾನ್ಯ. ಹಾಗಾಗಿ ಸ್ಥಳೀಯ ಆಡಳಿತ ಸಂಸ್ಥೆಗಳು ಈ ನಿಟ್ಟಿನಲ್ಲಿ ಕ್ರಮ ಕೈಗೊಂಡಾಗ ಸಾಂಕ್ರಾಮಿಕ ರೋಗ ಹರಡದಂತೆ ತಡೆಗಟ್ಟಬಹುದು. ಸಾರ್ವಜನಿಕರು ಆ ಬಗ್ಗೆ ಸಹಕರಿಸುವುದು ಅನಿವಾರ್ಯ ಎಂದರು.
ಪಂಚಾಯಿತಿ ಸದಸ್ಯರಾದ ಯೂಸುಫ್ ಬಾವಾ ಅವರಲ್ಲಿ ಸಾಂಕ್ರಾಮಿಕ ರೋಗ ಹರಡದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು ಎಂದು ಮನವಿ ಸಲ್ಲಿಸಲಾಯಿತು. ಬೆಳ್ಮ ಗ್ರಾಮ ಪಂಚಾಯಿತಿ ಮಾಜಿ ಆಧ್ಯಕ್ಷ ಉಸ್ಮಾನ್ ಅಕ್ಸಾ ಜಾಥಾಕ್ಕೆ ಚಾಲನೆ ನೀಡಿದರು.
ಬೆಳ್ಮ ಗ್ರಾಮ ಪಂಚಾಯಿತಿ ಅಧ್ಯಕ್ಷೆ ವಿಜಯಾ ಕೃಷ್ಣಪ್ಪ, ಪಂಚಾಯಿತಿ ಸದಸ್ಯರಾದ ಮಹಮ್ಮದ್ ಕಬೀರ್, ವಿದ್ಯಾರತ್ನ ಆಂಗ್ಲ ಮಾಧ್ಯಮ ಶಾಲೆಯ ಕಾರ್ಯದರ್ಶಿ ಸೌಮ್ಯಾ ಆರ್. ಶೆಟ್ಟಿ , ಮುಖ್ಯೋಫಾಧ್ಯಾಯಿನಿ ನಯೀಮ್ ಹಮೀದ್, ಸುಮಾ ಶಶಿಧರ್ ಹಾಗೂ ಭಾಸ್ಕರ್ ಉಪಸ್ಥಿತರಿದ್ದರು. ಶಿಕ್ಷಕ ರವಿಕುಮಾರ್ ಕೋಡಿ ಕಾರ್ಯಕ್ರಮ ನಿರೂಪಿಸಿದರು.





