ಉಳ್ಳಾಲ: ಸಮುದ್ರಕ್ಕೆ ಹಾರಿ ಮಹಿಳೆಯೋರ್ವರು ಆತ್ಮಹತ್ಯೆ ನಡೆಸಿರುವ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಉಚ್ಚಿಲ ಸಮುದ್ರ ತೀರದಲ್ಲಿ ನಡೆದಿದ್ದು, ಮಧ್ಯಾಹ್ನ ವೇಳೆ ಮೃತದೇಹ ಪತ್ತೆಯಾಗಿದೆ.
ಸಂಕೊಳಿಗೆ ನಿವಾಸಿ ಉಷಾ(60) ಆತ್ಮಹತ್ಯೆ ನಡೆಸಿದವರು. ಒಂದು ದಿನದಿಂದ ನಾಪತ್ತೆಯಾಗಿದ್ದ ಉಷಾ ಅವರ ಮೃತದೇಹ ಇಂದು ಸಮುದ್ರ ತೀರದಲ್ಲಿ ಪತ್ತೆಯಾಗಿದೆ. ಸ್ಥಳೀಯರು ಈ ಕುರಿತು ಉಳ್ಳಾಲ ಠಾಣಾ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿರುವ ಉಳ್ಳಾಲ ಪೊಲೀಸರು ಮೃತದೇಹವನ್ನು ಸ್ಥಳಮಹಜರಿಗೆ ಕಳುಹಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಉಷಾ ಅವರು ಜೀವನದಲ್ಲಿ ಜಿಗುಪ್ಸೆ ಹೊಂದಿ ಈ ಹಿಂದೆಯೂ ಎರಡು ಬಾರಿ ಆತ್ಮಹತ್ಯೆಗೆ ಯತ್ನಿಸಿದ್ದರು. ಆದರೆ ಸ್ಥಳೀಯರ ನೆರವಿನಿಂದ ಬದುಕಿ ಉಳಿದಿದ್ದರು. ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸೋಮೇಶ್ವರ -ಉಚ್ಚಿಲ ಸಮುದ್ರದಲ್ಲಿ ಮಹಿಳೆ ಶವ ಪತ್ತೆ
